ಸಂಗ್ರಹ ಚಿತ್ರ 
ಕ್ರಿಕೆಟ್

ಕೋಚ್ ಹುದ್ದೆಯಿಂದ ಅನಿಲ್ ಕುಂಬ್ಳೆ ಕೆಳಗಿಳಿಸೋಕೆ ಕ್ಯಾಪ್ಟನ್ ಕೊಹ್ಲಿ ಹೆಣೆದಿದ್ದ ಸಂಚು ಬಯಲು!

ಟೀಂ ಇಂಡಿಯಾ ಪ್ರಧಾನ ಕೋಚ್ ಹುದ್ದೆಯಿಂದ ತಂಡದ ಮಾಜಿ ನಾಯಕ ಅನಿಲ್ ಕುಂಬ್ಳೆ ಅವರನ್ನು ಕೆಳಗಿಳಿಸಲು ಕ್ಯಾಪ್ಟನ್ ಕೊಹ್ಲಿ ಹೆಣಿದಿದ್ದ ಸಂಚು ಬಯಲಾಗಿದ್ದು, ಬಿಸಿಸಿಐದೆ ಕೊಹ್ಲಿ ರವಾನಿಸುತ್ತಿದ್ದ ರಹಸ್ಯ ಇ-ಮೇಲ್ ಗಳಿಂದ ಈ ವಿಚಾರ ಬಹಿರಂಗವಾಗಿದೆ.

ನವದೆಹಲಿ: ಟೀಂ ಇಂಡಿಯಾ ಪ್ರಧಾನ ಕೋಚ್ ಹುದ್ದೆಯಿಂದ ತಂಡದ ಮಾಜಿ ನಾಯಕ ಅನಿಲ್ ಕುಂಬ್ಳೆ ಅವರನ್ನು ಕೆಳಗಿಳಿಸಲು ಕ್ಯಾಪ್ಟನ್ ಕೊಹ್ಲಿ ಹೆಣಿದಿದ್ದ ಸಂಚು ಬಯಲಾಗಿದ್ದು, ಬಿಸಿಸಿಐದೆ ಕೊಹ್ಲಿ ರವಾನಿಸುತ್ತಿದ್ದ ರಹಸ್ಯ ಇ-ಮೇಲ್ ಗಳಿಂದ ಈ ವಿಚಾರ ಬಹಿರಂಗವಾಗಿದೆ.
ಅನಿಲ್ ಕುಂಬ್ಳೆ ಟೀಂ ಇಂಡಿಯಾದ ಕೋಚ್ ಹುದ್ದೆಗೆ ರಾಜೀನಾಮೆ ನೀಡಲು ವಿರಾಟ್ ಕೊಹ್ಲಿ ಬಿಸಿಸಿಐಗೆ ಕಳುಹಿಸಿದ ಇಮೇಲ್ ಕಾರಣ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಕೊಹ್ಲಿ ಬಿಸಿಸಿಐ ಸಮಿತಿಗೆ ಕಳುಹಿಸಿದ್ದ ಇ-ಮೇಲ್ ಹಾಗೂ ಕೆಲವು ಸಂದೇಶಗಳು ಲಿಕ್ ಆಗಿವೆ ಎಂದು ವರದಿಯಲ್ಲಿ ಹೇಳಲಾಗಿದ್ದು, ಕುಂಬ್ಳೆ ಕುರಿತು ನಾಯಕ ವಿರಾಟ್ ಕೊಹ್ಲಿ ಸತತವಾಗಿ ಬಿಸಿಸಿಐ ಮುಖ್ಯ ಕಾರ್ಯದರ್ಶಿ ರಾಹುಲ್ ಜೋಹ್ರಿ ಅವರಿಗೆ ನಿರಂತರ ಇ-ಮೇಲ್ ಸಂದೇಶ ರವಾನಿಸುತ್ತಿದ್ದರು ಎಂದು ಹೇಳಲಾಗಿದೆ.
ಅನಿಲ್ ಕುಂಬ್ಳೆ ಕಳೆದ ವರ್ಷ ತಂಡದ ಕೋಚ್ ಹುದ್ದೆಗೆ ರಾಜೀನಾಮೆ ನೀಡಿದ್ದರು. ಆದರೆ ಕುಂಬ್ಳೆ ಅವಧಿಯಲ್ಲಿ ಆಡಿದ್ದ 17 ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಒಂದು ಪಂದ್ಯದಲ್ಲಿ ಮಾತ್ರ ಸೋಲುಂಡಿತ್ತು. ಕುಂಬ್ಳೆ ಕೋಚಿಂಗ್ ನಲ್ಲಿ ತಂಡ ಉನ್ನತ ಮಟ್ಟದಲ್ಲಿ ಪ್ರದರ್ಶನ ನೀಡುತ್ತಿದ್ದರೂ ಕೋಚ್ ಅವಧಿ ಮುಗಿಯುತ್ತಿದಂತೆ ರಾಜೀನಾಮೆ ನೀಡಿ ಹೊರಬಂದಿದ್ದರು. ಕುಂಬ್ಳೆ ರಾಜಿನಾಮೆಗೆ ವಿರಾಟ್ ಕೊಹ್ಲಿ ಅವರ ಇ-ಮೇಲ್ ಗಳೇ ಕಾರಣ ಎಂದು ಹೇಳಲಾಗುತ್ತಿದೆ.  ಆ ಬಳಿಕ ಕೊಹ್ಲಿಯೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ರವಿಶಾಸ್ತ್ರಿ ಅವರು ಕೋಚ್ ಆಗಿ ನೇಮಕಗೊಂಡಿದ್ದರು.
ಇದಕ್ಕೂ ಮೊದಲು ಟೀಂ ಇಂಡಿಯಾ ಕೋಚ್ ಆಯ್ಕೆ ಸಂದರ್ಭದಲ್ಲಿ ಹಾಲಿ ಕೋಚ್ ರವಿಶಾಸ್ತ್ರಿ ಕೂಡ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ ಸುಪ್ರೀಂ ಕೋರ್ಟ್ ನೇಮಕ ಮಾಡಿದ್ದ ಕ್ರಿಕೆಟ್ ಸಲಹಾ ಸಮಿತಿಯಲ್ಲಿದ್ದ ಸಚಿನ್, ವಿವಿಎಸ್ ಲಕ್ಷ್ಮಣ್, ಸೌರವ್ ಗಂಗೂಲಿ ಅವರು ಕುಂಬ್ಳೆ ಅವರನ್ನು ಶಿಫಾರಸ್ಸು ಮಾಡಿದ್ದರು. ಅಲ್ಲದೇ ಒಂದು ವರ್ಷದ ಕಾಲ ತಂಡದ ಕೋಚ್ ಆಗಿದ್ದ ಕುಂಬ್ಳೆ ಮುಂದಾಳತ್ವದಲ್ಲಿ ಟೀಂ ಇಂಡಿಯಾ ಟೆಸ್ಟ್ ಕ್ರಿಕೆಟಿನಲ್ಲಿ ನಂ.1 ಪಟ್ಟಕ್ಕೆೇರಿತ್ತು. ಕುಂಬ್ಳೆ ಕೂಡ ತಮ್ಮ ರಾಜೀನಾಮೆ ಬಳಿಕ ತಂಡದ ನಾಯಕ ಹಾಗೂ ತಮ್ಮ ಶೈಲಿ ಹೊಂದಾಣಿಕೆ ಆಗುತ್ತಿಲ್ಲ ಎಂದು ತಿಳಿಸಿದ್ದರು.
ಈ ಹಿಂದೆ ಕೂಡ ಅನಿಲ್ ಕುಂಬ್ಳೆ ರಾಜೀನಾಮೆ ಕುರಿತು ಪ್ರತಿಕ್ರಿಯೆ ನೀಡಿದ್ದ ಟೀಂ ಇಂಡಿಯಾ ಮಾಜಿ ಆಟಗಾರ ಬಿಶನ್ ಸಿಂಗ್, ತಂಡದಲ್ಲಿ ಒಬ್ಬರ ಮಾತು ಮಾತ್ರ ನಡೆಯುತ್ತಿದ್ದು, ಅದು ನಾಯಕ ವಿರಾಟ್ ಕೊಹ್ಲಿ ಅವರದ್ದು ಮಾತ್ರ. ಅವರು ತಂಡದಲ್ಲಿ ಒಂದು ರೀತಿಯಲ್ಲಿ ರಾಜನಂತೆ ವರ್ತಿಸುತ್ತಿದ್ದಾರೆ. ಅದ್ದರಿಂದಲೇ ಕುಂಬ್ಳೆ ರಾಜೀನಾಮೆ ನೀಡಿದ್ದಾರೆ ಎಂದು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT