ಆರ್ ಅಶ್ವಿನ್-ರೋಹಿತ ಶರ್ಮಾ 
ಕ್ರಿಕೆಟ್

ಪರ್ತ್ ಟೆಸ್ಟ್‌ಗೆ ಅಶ್ವಿನ್, ರೋಹಿತ್ ಅಲಭ್ಯ, ಟೆಸ್ಟ್ ಸರಣಿ ಗೆಲುವಿನ ಮೇಲೆ ಕಾರ್ಮೋಡ

ಗಾಯದ ಸಮಸ್ಯೆಯಿಂದಾಗಿ ಪರ್ತ್ ಟೆಸ್ಟ್‌ನಿಂದ ಆರ್ ಅಶ್ವಿನ್ ಹಾಗೂ ರೋಹಿತ್ ಶರ್ಮಾ ತಂಡದಿಂದ ಹೊರಗುಳಿಲಿದ್ದು ತಂಡಕ್ಕೆ ಸ್ವಲ್ಪ ಹಿನ್ನಡೆಯಲಾಗಲಿದೆ ಎಂದು ಟೀಂ ಇಂಡಿಯಾದ ನಾಯಕ...

ಪರ್ತ್: ಗಾಯದ ಸಮಸ್ಯೆಯಿಂದಾಗಿ ಪರ್ತ್ ಟೆಸ್ಟ್‌ನಿಂದ ಆರ್ ಅಶ್ವಿನ್ ಹಾಗೂ ರೋಹಿತ್ ಶರ್ಮಾ ತಂಡದಿಂದ ಹೊರಗುಳಿಲಿದ್ದು ತಂಡಕ್ಕೆ ಸ್ವಲ್ಪ ಹಿನ್ನಡೆಯಲಾಗಲಿದೆ ಎಂದು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. 
ಆಸ್ಟ್ರೇಲಿಯಾ ವಿರುದ್ಧದ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ 1-0 ಅಂತರದಿಂದ ಮುನ್ನಡೆ ಸಾಧಿಸಿದೆ. ಇನ್ನು ಎರಡನೇ ಪಂದ್ಯ ಪರ್ತ್ ನಲ್ಲಿ ನಾಳೆಯಿಂದ ಆರಂಭವಾಗಲಿದ್ದು ಆಸ್ಟ್ರೇಲಿಯಾ ವಿರುದ್ಧ ಸರಣಿ ಗೆಲ್ಲುವುದು ನಮ್ಮ ಗುರಿ ಎಂದು ಕೊಹ್ಲಿ ಹೇಳಿದ್ದಾರೆ. 
ಆಸ್ಟ್ರೇಲಿಯಾ ನೆಲದಲ್ಲಿ ಮೊದಲ ಟೆಸ್ಟ್ ಸರಣಿ ಗೆಲ್ಲುವ ತವಕದಲ್ಲಿರುವ ಟೀಂ ಇಂಡಿಯಾಗೆ ಅಶ್ವಿನ್ ಹಾಗೂ ರೋಹಿತ್ ಶರ್ಮಾ ಎರಡನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿರುವುದು ತಣ್ಣೀರೆರೆಚಿದಂತಾಗಿದೆ.
ಇನ್ನು ಯುವ ಕ್ರಿಕೆಟಿಗ ಪೃಥ್ವಿ ಶಾ ಅಭ್ಯಾಸ ಪಂದ್ಯದಲ್ಲಿ ಗಾಯಗೊಂಡಿದ್ದು ಸದ್ಯ ಶೀಘ್ರವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಆದರೆ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಒಟ್ಟಿನಲ್ಲಿ ಗಾಯದ ಸಮಸ್ಯೆ ಆಸ್ಟ್ರೇಲಿಯಾ ಟೆಸ್ಟ್ ಸರಣಿ ಮೇಲೆ ಕಾರ್ಮೋಡ ಕವಿದಂತಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ-Video

ಈ ಬಾರಿ ಮೈಸೂರು ದಸರಾ ಮತ್ತಷ್ಟು ಆಕರ್ಷಕ; 146 ಕಿ.ಮೀ. ದೀಪಾಲಂಕಾರ; 3,500 ಡ್ರೋನ್‌ಗಳ ಪ್ರದರ್ಶನ