ಜಿಗಿದು ಒಂದೇ ಕೈಯಲ್ಲಿ ಕೊಹ್ಲಿ ಅದ್ಭುತ ಕ್ಯಾಚ್; ನೆಟಿಗರು ಫಿದಾ, ವಿಡಿಯೋ ವೈರಲ್!
ಅತಿಥೇಯ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅದ್ಭುತ ಕ್ಯಾಚ್ ಹಿಡಿದಿದ್ದಾರೆ...
ಪರ್ಥ್(ಆಸ್ಟ್ರೇಲಿಯಾ): ಅತಿಥೇಯ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅದ್ಭುತ ಕ್ಯಾಚ್ ಹಿಡಿದಿದ್ದಾರೆ.
ಟಾಸ್ ಗೆದ್ದು ಆಸ್ಟ್ರೇಲಿಯಾ ಬ್ಯಾಟಿಂಗ್ ಮಾಡುತ್ತಿದ್ದು 70 ಓವರ್ ಮುಕ್ತಾಯಕ್ಕೆ 4 ವಿಕೆಟ್ ನಷ್ಟಕ್ಕೆ 201 ರನ್ ಗಳಿಸಿದೆ. ಈ ಮಧ್ಯೆ ಇಶಾಂತ್ ಶರ್ಮಾ ಬೌಲಿಂಗ್ ನಲ್ಲಿ ಆಸ್ಟ್ರೇಲಿಯಾ ಬ್ಯಾಟ್ಸ್ ಮನ್ ಹ್ಯಾಂಡ್ಸ್ ಕ್ಯೂಬ್ ಸ್ಲಿಪ್ ನಲ್ಲಿ ಪ್ಲೇಸ್ ಮಾಡಿದರು. ಮೂರನೇ ಸ್ಲಿಪ್ ನಲ್ಲಿದ್ದ ವಿರಾಟ್ ಕೊಹ್ಲಿ ನಾಲ್ಕನೇ ಸ್ಲಿಪ್ ನಲ್ಲಿ ಹೋಗುತ್ತಿದ್ದ ಚೆಂಡನ್ನು ಜಿಗಿದು ಒಂದೇ ಕೈಯಲ್ಲಿ ಹಿಡಿದಿದ್ದಾರೆ. ಈ ವಿಡಿಯೋ ಇದೀಗ ವೈರಲ್ ಆಗಿದೆ.
ವಿರಾಟ್ ಕೊಹ್ಲಿ ಒಂದೇ ಕೈಯಲ್ಲಿ ಕ್ಯಾಚ್ ಹಿಡಿದಿರುವುದಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಟ್ವೀಟರಿಗರು ತಮ್ಮ ನೆಚ್ಚಿನ ಆಟಗಾರರನ್ನು ಪ್ರಶಂಶಿಸುವ ಟ್ವೀಟ್ ಗಳನ್ನು ಮಾಡುತ್ತಿದ್ದಾರೆ.
Catch like a Super Hero boss ❤