ಶತಕ ಸಂಭ್ರಮದಲ್ಲಿ ಕೊಹ್ಲಿ 
ಕ್ರಿಕೆಟ್

2ನೇ ಟೆಸ್ಟ್: ಮೊದಲ ಇನ್ನಿಂಗ್ಸ್ ನಲ್ಲಿ ಕ್ಯಾಪ್ಟನ್ ಕೊಹ್ಲಿ ಭರ್ಜರಿ ಶತಕ

ಆಸ್ಟ್ರೇಲಿಯಾ ವಿರುದ್ಧ ಪರ್ತ್ ನಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ.

ಪರ್ತ್: ಆಸ್ಟ್ರೇಲಿಯಾ ವಿರುದ್ಧ ಪರ್ತ್ ನಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ.
ಇಂದು ಅಂಜಿಕ್ಯಾ ರಹಾನೆರೊಂದಿಗೆ ಮೂರನೇ ದಿನದಾಟ ಆರಂಭಿಸಿದ ವಿರಾಟ್ ಕೊಹ್ಲಿ 12 ಬೌಂಡರಿಗಳ ನೆರವಿನಿಂದ 221 ಎಸೆತಗಳಲ್ಲಿ ಶತಕ ಸಿಡಿಸಿ ಸಂಭ್ರಮಿಸಿದರು. ಕೊಹ್ಲಿ ಇದು ಟೆಸ್ಟ್ ಕ್ರಿಕೆಟ್ ನ 25ನೇ ಶತಕವಾಗಿರುವುದು ವಿಶೇಷ.
ಇನ್ನು ಮೂರನೇ ದಿನದಾಟ ಆರಂಭವಾದ ಕೆಲವೇ ಹೊತ್ತಿನಲ್ಲಿ ಅರ್ಧಶತಕ ಸಿಡಿಸಿ ಭರವಸೆ ಮೂಡಿಸಿದ್ದ ರಹಾನೆ 51 ರನ್ ಗಳಿಸಿ ಲಿಯಾನ್ ಬೌಲಿಂಗ್ ನಲ್ಲಿ ಔಟ್ ಆದರು. ಇತ್ತೀಚಿನ ವರದಿಗಳು ಬಂದಾಗ ಭಾರತ ತಂಡ ಮೊದಲ ಇನ್ನಿಂಗ್ಸ್ ನಲ್ಲಿ 4 ವಿಕೆಟ್ ನಷ್ಟಕ್ಕೆ 214 ರನ್ ಗಳಿಸಿದ್ದು, ಇನ್ನೂ 112 ರನ್ ಗಳ ಹಿನ್ನಡೆಯಲ್ಲಿದೆ.
105 ರನ್ ಗಳಿಸಿರುವ ನಾಯಕ ವಿರಾಟ್ ಕೊಹ್ಲಿ ಮತ್ತು 18 ರನ್ ಗಳಿಸಿರುವ ಹನುಮ ವಿಹಾಕಿ ಕ್ರೀಸ್ ಕಾಯ್ದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಹೆಚ್ಚಳಕ್ಕೆ ಸಂಪುಟ ಸಮ್ಮತಿ, ಲೀಟರ್‌ಗೆ 8 ರೂ. ಏರಿಕೆ?

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ