ಇಶಾಂತ್ ಶರ್ಮಾ-ರವೀಂದ್ರ ಜಡೇಜಾ 
ಕ್ರಿಕೆಟ್

ಒಂದೆಡೆ ಸೋಲಿನ ಕಹಿ ನೆನಪು; ಈ ಮಧ್ಯೆ ಮೈದಾನದಲ್ಲಿ ಇಶಾಂತ್-ಜಡೇಜಾ ಕಿತ್ತಾಟ, ವಿಡಿಯೋ ವೈರಲ್!

ಆತಿಥೇಯ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ವೇಳೆ ವೇಗಿ ಇಶಾಂತ್ ಶರ್ಮಾ ಹಾಗೂ ಆಲ್ ರೌಂಡರ್ ರವೀಂದ್ರ ಜಡೇಜಾ ಪರಸ್ಪರ ಕಿತ್ತಾಡಿಕೊಂಡಿದ್ದಾರೆ.

ಪರ್ತ್: ಆತಿಥೇಯ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ವೇಳೆ ವೇಗಿ ಇಶಾಂತ್ ಶರ್ಮಾ ಹಾಗೂ ಆಲ್ ರೌಂಡರ್ ರವೀಂದ್ರ ಜಡೇಜಾ ಪರಸ್ಪರ ಕಿತ್ತಾಡಿಕೊಂಡಿದ್ದು ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 
ಪರ್ತ್ ಟೆಸ್ಟ್ ನಲ್ಲಿ ಆಡುವ 11ರ ಬಳಗದಲ್ಲಿ ರವೀಂದ್ರ ಜಡೇಜಾಗೆ ಅವಕಾಶ ಸಿಕ್ಕಿರಲಿಲ್ಲ. ಆಟಗಾರನಿಗೆ ಬದಲಾಗಿ ಫೀಲ್ಡಿಂಗ್ ಮಾಡುತ್ತಿದ್ದಾಗ ಜಡೇಜಾ ಮತ್ತು ಇಶಾಂತ್ ಶರ್ಮಾ ಮೈದಾನದಲ್ಲಿಯೇ ಜಗಳವಾಡಿಕೊಂಡಿದ್ದಾರೆ. ಇನ್ನು ಅನುಭವಿ ಹಾಗೂ ಹಿರಿಯ ಆಟಗಾರರು ಮೈದಾನದಲ್ಲಿಯೇ ಕಿತ್ತಾಡಿಕೊಂಡಿದ್ದು ಟೀ ಇಂಡಿಯಾದಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವ ಪ್ರಶ್ನೆ ಎದ್ದಿದೆ. 
ಕ್ಷೇತ್ರ ರಕ್ಷಣೆ ವಿಚಾರವಾಗಿ ಜಡೇಜಾ ಹಾಗೂ ಇಶಾಂತ್ ನಡುವೆ ಮಾತಿನ ಚಕಮಕಿ ನಡೆದಿದೆ. ಮಾತು ಮಗಿಸಿ ಮುಂದೆ ಹೋಗಿದ್ದ ಇಶಾಂತ್ ಮತ್ತೆ ಜಡೇಜಾ ಕಡೆ ತಿರುಗಿ ಬೆರಳು ಮಾಡಿ ಜಗಳಕ್ಕೆ ಇಳಿದಿದ್ದಾರೆ. ಈ ವೇಳೆ ಕೂಡಲೇ ಮೊಹಮ್ಮದ್ ಶಮಿ ಹಾಗೂ ಕುಲದೀಪ್ ನೋಡಿ ತಕ್ಷಣವೇ ಅಲ್ಲಿಗೆ ಬಂದು ಇಬ್ಬರನ್ನು ಸಮಾಧಾನ ಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!

ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ: 'ಸ್ಟಿಂಗ್ ಆಪರೇಷನ್' ಕುರಿತು ಸಿಎಂ DKS ಎಚ್ಚರಿಕೆ ಕರೆಗೆ ಸಚಿವರಿಂದ ಬೆಂಬಲ