ಶಿವಂ ದುಬೆ-ಕೊಹ್ಲಿ 
ಕ್ರಿಕೆಟ್

ಅದೃಷ್ಟ ಖುಲಾಯಿಸ್ತು: ರಣಜಿಯಲ್ಲಿ ಒಂದೇ ಓವರ್‌ನಲ್ಲಿ 5 ಸಿಕ್ಸರ್ ಹೊಡೆದ, ಆರ್‌ಸಿಬಿಗೆ 5 ಕೋಟಿಗೆ ಸೇಲಾದ!

ರಣಜಿ ಟ್ರೋಫಿಯಲ್ಲಿ ಬರೋಡಾ ವಿರುದ್ಧದ ಪಂದ್ಯದಲ್ಲಿ ಮುಂಬೈ ಆಲ್ ರೌಂಡರ್ ಶಿವಂ ದುಬೆ ಒಂದೇ ಓವರ್ ನಲ್ಲಿ ಸತತ ಐದು ಸಿಕ್ಸರ್ ಸಿಡಿಸಿದ್ದು ಆತನ ಹಣೆ ಬರಹವನ್ನೇ ಬದಲಾಯಿಸಿದೆ...

ಬೆಂಗಳೂರು: ರಣಜಿ ಟ್ರೋಫಿಯಲ್ಲಿ ಬರೋಡಾ ವಿರುದ್ಧದ ಪಂದ್ಯದಲ್ಲಿ ಮುಂಬೈ ಆಲ್ ರೌಂಡರ್ ಶಿವಂ ದುಬೆ ಒಂದೇ ಓವರ್ ನಲ್ಲಿ ಸತತ ಐದು ಸಿಕ್ಸರ್ ಸಿಡಿಸಿದ್ದು ಆತನ ಹಣೆ ಬರಹವನ್ನೇ ಬದಲಾಯಿಸಿದೆ. 
ಹೌದು 25 ವರ್ಷದ ಶಿವಂ ದುಬೆ ಅವರು ರಣಜಿ ಟ್ರೋಫಿ ಅಂತಿಮ ದಿನವಾದ ನಿನ್ನೆ ಎಡಗೈ ಸ್ಪಿನ್ನರ್ ಸ್ವಪ್ನಿಲ್ ಸಿಂಗ್ ಓವರ್ ನಲ್ಲಿ ಐದು ಎಸೆತಗಳಲ್ಲಿ ಐದು ಸಿಕ್ಸರ್ ಸಿಡಿಸಿದ್ದರು. ಅವರ ಅದೃಷ್ಟ ಖುಲಾಯಿಸಿದ್ದು ಇಂಡಿಯನ್ ಪ್ರಿಮಿಯರ್ ಲೀಗ್ 2019ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ಪರ ಆಡಲಿದ್ದಾರೆ. 
ಇದು ಬರೋಬ್ಬರಿ 5 ಕೋಟಿ ರುಪಾಯಿಗೆ ಶಿವಂ ದುಬೆ ಆರ್ಸಿಬಿಗೆ ಸೇಲಾಗಿದ್ದಾರೆ. ವಿರಾಟ್ ಕೊಹ್ಲಿ ನಾಯಕತ್ವದ ಆರ್ಸಿಬಿಗೆ ಶಿವಂ ದುಬೆ ಪ್ರಬಲ ಅಸ್ತ್ರವಾಗುತ್ತಾರೆ ಅನ್ನುವುದು ಮುಂದಿನ ವರ್ಷ ತಿಳಿಯಲಿದೆ. 
ಬಹುನಿರೀಕ್ಷಿತ 2019ರ ಐಪಿಎಲ್ ಹರಾಜು ಪ್ರಕ್ರಿಯೆ ಜೈಪುರದಲ್ಲಿ ನಡೆದಿದ್ದು, ಎಡಗೈ ವೇಗಿ ಜಯದೇವ್ ಉನದ್ಕಟ್ ರಾಜಸ್ಥಾನ ರಾಯಲ್ಸ್ ತಂಡಕ್ಕೆ 8.4 ಕೋಟಿ ರೂಪಾಯಿಗೆ ಮಾರಾಟವಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ