ಆಸ್ಟ್ರೇಲಿಯಾ-ನ್ಯೂಜಿಲ್ಯಾಂಡ್ ವಿರುದ್ಧದ ಏಕದಿನ, ಟಿ20 ಸರಣಿಗೆ ಟೀಂ ಇಂಡಿಯಾ ತಂಡ ಪ್ರಕಟ
ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ತಂಡವನ್ನು ಬಿಸಿಸಿಐ ಪ್ರಕಟಿಸಿದ್ದು ತಂಡದಲ್ಲಿ ಯಾರೆಲ್ಲಾ...
ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ತಂಡವನ್ನು ಬಿಸಿಸಿಐ ಪ್ರಕಟಿಸಿದ್ದು ತಂಡದಲ್ಲಿ ಯಾರೆಲ್ಲಾ ಸ್ಥಾನ ಪಡೆದಿದ್ದಾರೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಏಕದಿನ ತಂಡಕ್ಕೆ ಮರಳಿದ್ದು ಇನ್ನು ನ್ಯೂಜಿಲ್ಯಾಂಡ್ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಮರಳಿದ್ದಾರೆ.
ಆಸೀಸ್, ನ್ಯೂಜಿಲ್ಯಾಂಡ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ತಂಡ
ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ, ಕೆಎಲ್ ರಾಹುಲ್, ಶಿಖರ್ ಧವನ್, ಅಂಬಟ್ಟಿ ರಾಯುಡು, ದಿನೇಶ್ ಕಾರ್ತಿಕ್, ಕೇದಾರ್ ಜಾದವ್, ಎಂಎಸ್ ಧೋನಿ, ಹಾರ್ದಿಕ್ ಪಾಂಡ್ಯ, ಕುಲದೀಪ್ ಯಾದವ್, ಯಜುವೇಂದ್ರ ಚಹಾಲ್, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಜಸ್ ಪ್ರೀತ್ ಬುಮ್ರಾ, ಕಲೀಲ್ ಅಹಮ್ಮದ್, ಮೊಹಮ್ಮದ್ ಶಮಿ.
ನ್ಯೂಜಿಲ್ಯಾಂಡ್ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ತಂಡ
ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ, ಕೆಎಲ್ ರಾಹುಲ್, ಶಿಖರ್ ಧವನ್, ರಿಷಬ್ ಪಂತ್, ದಿನೇಶ್ ಕಾರ್ತಿಕ್, ಕೇದಾರ್ ಜಾದವ್, ಎಂಎಸ್ ಧೋನಿ, ಹಾರ್ದಿಕ್ ಪಾಂಡ್ಯ, ಕುಲದೀಪ್ ಯಾದವ್, ಯಜುವೇಂದ್ರ ಚಹಾಲ್, ಭುವನೇಶ್ವರ್ ಕುಮಾರ್, ಜಸ್ ಪ್ರೀತ್ ಬುಮ್ರಾ, ಕಲೀಲ್ ಅಹಮ್ಮದ್, ಕೃನಾಲ್ ಪಾಂಡ್ಯ.