ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

ಬಾಕ್ಸಿಂಗ್ ಡೇ ಟೆಸ್ಟ್: ಮೊದಲ ದಿನದಾಟ ಅಂತ್ಯಕ್ಕೆ ಭಾರತ 215/2

ಆಸ್ಟ್ರೇಲಿಯಾ ವಿರುದ್ಧ ಮೆಲ್ಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 3ನೇ ಟೆಸ್ಟ್ ಪಂದ್ಯದ ಮೊದಲ ದಿನದಾಟ ಅಂತ್ಯವಾಗಿದ್ದು, ಭಾರತ ತಂಡ 2 ವಿಕೆಟ್ ನಷ್ಟಕ್ಕೆ 215 ರನ್ ಗಳಿಸಿದೆ.

ಪೂಜಾರ ಅರ್ಧಶತಕ ಸಂಭ್ರಮ
Srinivasa Murthy VN
Updated On : 26 Dec 2018, 1:20 am
ಮೆಲ್ಬೋರ್ನ್: ಆಸ್ಟ್ರೇಲಿಯಾ ವಿರುದ್ಧ ಮೆಲ್ಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 3ನೇ ಟೆಸ್ಟ್ ಪಂದ್ಯದ ಮೊದಲ ದಿನದಾಟ ಅಂತ್ಯವಾಗಿದ್ದು, ಭಾರತ ತಂಡ 2 ವಿಕೆಟ್ ನಷ್ಟಕ್ಕೆ 215 ರನ್ ಗಳಿಸಿದೆ.
ದಿನದಾಟದ ಅಂತ್ಯಕ್ಕೆ ವಿರಾಟ್ ಕೊಹ್ಲಿ ಮತ್ತು ಚೇತೇಶ್ವರ ಪೂಜಾರ ಕ್ರೀಸ್ ಕಾಯ್ದುಕೊಂಡಿದ್ದು, 47 ರನ್ ಗಳಿಸಿರುವ ಕೊಹ್ಲಿ ಅರ್ಧಶತಕದ ಹೊಸ್ತಿಲಲ್ಲಿದ್ದರೆ, 68 ರನ್ ಗಳಿಸಿರುವ ಪೂಜಾರ ನಾಳೆಗೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತಕ್ಕೆ ಆಸಿಸ್ ವೇಗಿ ಪ್ಯಾಟ್ ಕಮಿನ್ಸ್ ಮೊದಲ ಆಘಾತ ನೀಡಿದರು. 8 ರನ್ ಗಳಿಸಿದ್ದ ಹನುಮ ವಿಹಾರಿ ಅವರನ್ನು ಔಟ್ ಮಾಡಿದರು. ಆದರೆ ಮತ್ತೊಂದು ಬದಿಯಲ್ಲಿದ್ದ ಮಯಾಂಕ್ ಅಗರ್ವಾಲ್ ಮಾತ್ರ ಪದಾರ್ಪಣೆ ಪಂದ್ಯದಲ್ಲೇ ತಮ್ಮ ತಾಕತ್ತು ಪ್ರದರ್ಶನ ಮಾಡಿದರು. ಪೂಜಾರ ಜೊತೆಗೂಡಿದ ಅವರು 76 ರನ್ ಗಳಿಸಿ ಮತ್ತದೇ ಕಮಿನ್ಸ್ ಬೌಲಿಂಗ್ ನಲ್ಲಿ ಔಟ್ ಆದರು.

Advertisement

Advertisement

ಆ ಬಳಿಕ ಜೊತೆಗೂಡಿದ ನಾಯಕ ಕೊಹ್ಲಿ ಮತ್ತು ಪೂಜಾರ ಭಾರತಕ್ಕೆ ಮತ್ತಾವುದೇ ಆಘಾತ ಎದುರಾಗದಂತೆ ನೋಡಿಕೊಂಡರು. ನಿಧಾನಗತಿಯಲ್ಲೇ ಬ್ಯಾಟಿಂಗ್ ಮಾಡಿ ರನ್ ಕಲೆಹಾಕಿದ ಈ ಜೋಡಿ ನಾಳೆಗೆ ಕ್ರೀಸ್ ಕಾಯ್ದುಕೊಂಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement