ಮೆಲ್ಬರ್ನ್: ಟೀಂ ಇಂಡಿಯಾ ತಂಡಕ್ಕೆ ಆಯ್ಕೆಯಾಗಿ ಚೊಚ್ಚಲ ಪಂದ್ಯದಲ್ಲೇ ಅರ್ಧ ಶತಕ ಸಿಡಿಸಿರುವ ಮೂಲಕ ಕನ್ನಡಿಗ ಮಾಯಾಂಕ್ ಅಗರ್ವಾಲ್ ದಿಗ್ಗಜ ಸುನೀಲ್ ಗವಾಸ್ಕರ್ ರನ್ನು ಹಿಂದಿಕ್ಕಿದ್ದಾರೆ.
ಆತಿಥೇಯ ಆಸ್ಟ್ರೇಲಿಯಾ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯಕ್ಕೆ ಪಾದಾರ್ಪಣೆ ಮಾಡಿದ್ದ ಮಾಯಾಂಕ್ ಅಗರ್ವಾಲ್ ಚೊಚ್ಚಲ ಪಂದ್ಯದಲ್ಲೇ 76 ರನ್ ಗಳಿಸುವ ಮೂಲಕ ಸಾಧನೆ ಮಾಡಿದ್ದಾರೆ.
ಪ್ರಾರಂಭದಲ್ಲಿ ಮಾಯಾಂಕ್ ಅಗರವಾಲ್ ರನ್ನು ತಂಡದಿಂದ ಕೈಬಿಡಲಾಗಿತ್ತಾದರೂ ಉದಯೋನ್ಮುಖ ಪೃಥ್ವಿ ಶಾ ಗಾಯಗೊಂಡ ಹಿನ್ನೆಲೆಯಲ್ಲಿ ಅಂತಿಮ ಎರಡು ಟೆಸ್ಟ್ ಪಂದ್ಯಗಳಿಗಾಗಿ ಮಾಯಾಂಕ್ ರನ್ನು ತಂಡಕ್ಕೆ ಆಯ್ಕೆ ಮಾಡಲಾಗಿತ್ತು.
ಚೊಚ್ಚಲ ಪಂದ್ಯದಲ್ಲೇ ಅರ್ಧ ಶತಕ ಸಿಡಿಸುವ ಮೂಲಕ ಮಾಯಾಂಕ್ ಮಾಜಿ ದಿಗ್ಗಜ ಸುನೀಲ್ ಗವಾಸ್ಕರ್ ಅವರ ದಾಖಲೆಯನ್ನು ಹಿಂದಿಕ್ಕಿದ್ದಾರೆ. 1971ರಲ್ಲಿ ತಂಡಕ್ಕೆ ಪಾದಾರ್ಪಣೆ ಮಾಡಿದ್ದ ಗವಾಸ್ಕರ್ ಮೊದಲ ಪಂದ್ಯದಲ್ಲೇ ವೆಸ್ಟ್ ಇಂಡೀಸ್ ವಿರುದ್ಧ 65 ರನ್ ಗಳಿಸಿದ್ದರು.
ಇನ್ನು ತಂಡದಲ್ಲಿ ಅವಕಾಶ ಸಿಕ್ಕರೂ ಸರಿಯಾಗಿ ಬಳಸಿಕೊಳ್ಳದ ಕೆಎಲ್ ರಾಹುಲ್ ಅವರಿಗೆ ಟ್ವೀಟರಿಗರನ್ನು ತೀವ್ರ ತರಾಟೆ ತೆಗೆದುಕೊಂಡಿದ್ದಾರೆ.