ಮೆಲ್ಬೋರ್ನ್: ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಶತಕ ಮಿಸ್ ಮಾಡಿಕೊಂಡರೂ ನೂತನ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.
ಹೌದು.. ವಿರಾಟ್ ಕೊಹ್ಲಿ ಮೆಲ್ಬೋರ್ನ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ 3ನೇ ಟೆಸ್ಟ್ ಪಂದ್ಯದಲ್ಲಿ 82 ರನ್ ಗಳಿಸಿ ಕೇವಲ 18 ರನ್ ಗಳ ಅಂತರದಲ್ಲಿ ತಮ್ಮ ವೃತ್ತಿ ಜೀವನದ 26ನೇ ಶತಕವನ್ನು ಮಿಸ್ ಮಾಡಿಕೊಂಡರು. ಆದರೆ ತಮ್ಮ ಅಮೋಘ ಇನ್ನಿಂಗ್ಸ ಮೂಲಕ ಕೊಹ್ಲಿ ಮತ್ತೊಂದು ಅಂತಾರಾಷ್ಟ್ರೀಯ ದಾಖಲೆಯೊಂದನ್ನು ಮುರಿದಿದ್ದಾರೆ.
ಕೊಹ್ಲಿ ಪ್ರಸಕ್ತ ಕಾಲೆಂಡರ್ ವರ್ಷದಲ್ಲಿ ವಿದೇಶ ನೆಲದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಬ್ಯಾಟ್ಸಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದು, ಈ ಬಾರಿ ದಿ ವಾಲ್ ಖ್ಯಾತಿಯ ದೇಶದ ಹೆಮ್ಮೆಯ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರ ದಾಖಲೆಯನ್ನು ಕೊಹ್ಲಿ ಮುರಿದಿದ್ದಾರೆ. ಕೊಹ್ಲಿ ಇದೀಗ ಕ್ಯಾಲೆಂಡರ್ ವರ್ಷವೊಂದರಲ್ಲಿ ವಿದೇಶ ನೆಲದಲ್ಲಿ ಅತಿ ಹೆಚ್ಚು ರನ್ ಗಳಿಸಿ ಭಾರತೀಯ ಬ್ಯಾಟ್ಸಮನ್ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದ್ದಾರೆ.
ಕೊಹ್ಲಿ 2018ನೇ ಸಾಲಿನಲ್ಲಿ ಇದುವರೆಗೆ 1138 ರನ್ ಗಳಿಸಿದ್ದಾರೆ. ಈ ಹಿಂದೆ 2002ರಲ್ಲಿ ರಾಹುಲ್ ದ್ರಾವಿಡ್ 1137 ರನ್ ಗಳಿಸಿರುವುದು ಇದುವರೆಗಿನ ಶ್ರೇಷ್ಠ ಸಾಧನೆಯಾಗಿತ್ತು. ಈ ಮೂಲಕ ದೀರ್ಘ ಕಾಲದ ದಾಖಲೆಯನ್ನು ಮುರಿದಿದ್ದಾರೆ. ಅಂತೆಯೇಮಾಜಿ ದಿಗ್ಗಜ ಮೊಹಿಂದರ್ ಅಮರ್ನಾಥ್ 1983ರಲ್ಲಿ 1065 ರನ್ ಗಳಿಸಿದ್ದರು.
ಇನ್ನು ಆಸ್ಟ್ರೇಲಿಯಾ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಬ್ಯಾಟ್ಸಮನ್ಗಳ ಸಾಲಿನಲ್ಲಿ ವಿವಿಎಸ್ ಲಕ್ಷ್ಮಣ್ (1236) ದಾಖಲೆಯನ್ನು ಕೊಹ್ಲಿ ಮುರಿದಿದ್ದಾರೆ. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಕ್ರಿಕೆಟ್ ಐಕಾನ್ 1809 ರನ್ ಪೇರಿಸಿದ್ದಾರೆ.
ಆಸಿಸ್ ವಿರುದ್ಧ ಗರಿಷ್ಠ ರನ್ 2ನೇ ಸ್ಥಾನಕ್ಕೇರಿದ ಕೊಹ್ಲಿ
ಇನ್ನು ಇದೇ ಕೊಹ್ಲಿ ಮತ್ತೊಂದು ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದು, ಆಸ್ಟ್ರೇಲಿಯಾ ವಿರುದ್ಧ ಗರಿಷ್ಠ ರನ್ ಬಾರಿಸಿರುವ ಭಾರತದ 2ನೇ ಆಟಗಾರ ಎಂಬ ಕೀರ್ತಿಗೂ ಭಾಜನರಾಗಿದ್ದಾರೆ. ಕಾಂಗರೂಗಳ ವಿರುದ್ಧ ಒಟ್ಟು 60 ಪಂದ್ಯಗಳನ್ನಾಡಿರುವ ಕೊಹ್ಲಿ 52.72ರ ಸರಾಸರಿಯಲ್ಲಿ 3216* ರನ್ ಕಲೆ ಹಾಕಿದ್ದಾರೆ. ಈ ಪೈಕಿ 12 ಶತಕ ಮತ್ತು 13 ಅರ್ಧಶತಕಗಳೂ ಕೂಡ ಸೇರಿವೆ. ಇನ್ನು ಪಟ್ಟಿಯಲ್ಲಿ ಭಾರತ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅಗ್ರ ಸ್ಥಾನದಲ್ಲಿದ್ದು, ಸಚಿನ್ ಒಟ್ಟು 110 ಪಂದ್ಯಗಳನ್ನಾಡಿದ್ದು, 49.68 ಸರಾಸರಿಯಲ್ಲಿ 6707 ರನ್ ಗಳಿಸಿದ್ದಾರೆ. ಈ ಪೈಕಿ 20 ಶತಕ ಹಾಗೂ 31 ಅರ್ಧಶತಕಗಳೂ ಸೇರಿವೆ.
3173 ರನ್ ಗಳಿಸಿದ್ದ ಲಕ್ಷ್ಮಣ್ ಮೂರನೇ ಸ್ಥಾನದಲ್ಲಿದ್ದು, 3071 ರನ್ ಗಳಿಸಿರುವ ದ್ರಾವಿಡ್ ನಾಲ್ಕನೇ ಸ್ಥಾನದಲ್ಲಿದ್ದಾರೆ. ಇನ್ನು ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ 2589 ರನ್ ಗಳೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics