ನವದೆಹಲಿ: ನಿನ್ನೆಯಷ್ಟೇ ಮೆಲ್ಬೋರ್ನ್ ನಲ್ಲಿ ನಡೆದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಟೀಂ ಇಂಡಿಯಾಗೆ ಮತ್ತೊಂದು ಸಿಹಿಸುದ್ದಿ ಲಭಿಸಿದ್ದು, ತಂಡದ ಸ್ಫೋಟಕ ಆಟಗಾರ ರೋಹಿತ್ ಶರ್ಮಾ ಹೆಣ್ಣುಮಗುವಿಗೆ ತಂದೆಯಾಗಿದ್ದಾರೆ.
ಹೌದು.. ರೋಹಿತ್ ಶರ್ಮಾ ಅವರ ಪತ್ನಿ ರಿತಿಕಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಮಗು ಮತ್ತು ತಾಯಿ ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಸ್ವತಃ ಬಿಸಿಸಿಐ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪ್ರಕಟಣೆ ನೀಡಿದ್ದು, ರೋಹಿತ್ ಶರ್ಮಾ ಮತ್ತು ರಿತಿಕಾ ಅವರಿಗೆ ಶುಭಾಶಯ ಕೋರಿದೆ.
ಇನ್ನು ಪ್ರಸ್ತುತ ಆಸ್ಟ್ರೇಲಿಯಾ ವಿರುದ್ದದ ಟೆಸ್ಟ್ ಸರಣಿಯಲ್ಲಿ ಪಾಲ್ಗೊಂಡಿರುವ ರೋಹಿತ್ ಶರ್ಮಾ ಹೆಣ್ಣು ಮಗುವಿಗೆ ತಂದೆಯಾದ ವಿಚಾರ ತಿಳಿಯುತ್ತಿದ್ದಂತೆಯೇ ಪತ್ನಿ ಮತ್ತು ಮಗುವನ್ನು ನೋಡಲು ಮುಂಬೈಗೆ ದೌಡಾಯಿಸಿದ್ದಾರೆ. ಈಗಾಗಲೇ ರೋಹಿತ್ ಆಸ್ಟ್ರೇಲಿಯಾದಿಂದ ಮುಂಬೈ ವಿಮಾನ ಹತ್ತಿದ್ದು, ಶೀಘ್ರ ಅವರ ಪತ್ನಿ ಮತ್ತು ಮಗುವನ್ನು ನೋಡಲಿದ್ದಾರೆ. ಈ ಹಿನ್ನಲೆಯಲ್ಲಿ ಇದೇ ಜನವರಿ 3ರಿಂದ ಆರಂಭವಾಗಲಿರುವ ಸಿಡ್ನಿ ಟೆಸ್ಟ್ ಗೆ ರೋಹಿತ್ ಶರ್ಮಾ ಅಲಭ್ಯರಾಗಲಿದ್ದಾರೆ.
ಬಳಿಕ ಆರಂಭವಾಗಲಿರುವ ಏಕದಿನ ಸರಣಿಗೆ ರೋಹಿತ್ ಶರ್ಮಾ ತಂಡವನ್ನು ಸೇರಿಕೊಳ್ಳಲ್ಲಿದ್ದಾರೆ. ರೋಹಿತ್ ಶರ್ಮಾ ಅಲಭ್ಯತೆಯಿಂದ ತೆರವಾಗುವ ಜಾಗಕ್ಕೆ ಹಾರ್ದಿಕ್ ಪಾಂಡ್ಯಾ ಸ್ಥಾನ ತುಂಬುವ ಸಾದ್ಯತೆ ಇದೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics