ಸಂಗ್ರಹ ಚಿತ್ರ 
ಕ್ರಿಕೆಟ್

ದಾಖಲೆ ಬರೆದ ವಿರಾಟ್ ಕೊಹ್ಲಿ- ಅಜಿಂಕ್ಯಾ ರಹಾನೆ ಭರ್ಜರಿ ಜೊತೆಯಾಟ

ಕಿಂಗ್ಸ್ ಮೇಡ್ ಮೈದಾನದಲ್ಲಿ ಅತ್ಯುತ್ತಮ ಜೊತೆಯಾಟದ ಮೂಲಕ ಭಾರತದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ ವಿರಾಟ್ ಕೊಹ್ಲಿ ಮತ್ತು ರಹಾನೆ ಜೋಡಿ ನೂತನ ದಾಖಲೆಯೊಂದನ್ನು ಬರೆದಿದೆ.

ಡರ್ಬನ್: ಕಿಂಗ್ಸ್ ಮೇಡ್ ಮೈದಾನದಲ್ಲಿ ಅತ್ಯುತ್ತಮ ಜೊತೆಯಾಟದ ಮೂಲಕ ಭಾರತದ ಗೆಲುವಿನಲ್ಲಿ ಮಹತ್ತರ  ಪಾತ್ರವಹಿಸಿದ ವಿರಾಟ್ ಕೊಹ್ಲಿ ಮತ್ತು ರಹಾನೆ ಜೋಡಿ ನೂತನ ದಾಖಲೆಯೊಂದನ್ನು ಬರೆದಿದೆ.
ಡರ್ಬನ್ ನ ಕಿಂಗ್ಸ್ ಮೇಡ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಭಾರತ ತಂಡದ ಪರ 3ನೇ ವಿಕೆಟ್ ಜೊತೆಯಾಟದಲ್ಲಿ  ಕೊಹ್ಲಿ-ರಹಾನೆ ಜೋಡಿ ಭರ್ಜರಿ 189 ರನ್ ಅಮೂಲ್ಯ ಕಾಣಿಕೆ ನೀಡಿದ್ದರು. ಇವರ ಅದ್ಬುತ ಜೊತೆಯಾಟದ ನೆರವಿನಿಂದ  ಭಾರತ ತಂಡ ಆಪ್ರಿಕಾ ವಿರುದ್ಧ 6 ವಿಕೆಟ್ ಗಳ ಭರ್ಜರಿ ಜಯಸಾಧಿಸಿದೆ.
ತಂಡದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ ಈ ಜೊತೆಯಾಟ ಇದೀಗ ದಾಖಲೆಯೊಂದನ್ನು ನಿರ್ಮಿಸಿದ್ದು, ಭಾರತ  ತಂಡದ ಪರ ದಕ್ಷಿಣ ಆಫ್ರಿಕಾದಲ್ಲಿ ದಾಖಲಾದ ಅತೀ ಹೆಚ್ಚು ರನ್ ಗಳ ಜೊತೆಯಾಟ ಎಂಬ ದಾಖಲೆ ಬರೆದಿದೆ. ಇದಕ್ಕೂ  ಮೊದಲು 2003ರ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ತೆಂಡೂಲ್ಕರ್ ಮತ್ತು ಮಹಮದ್ ಕೈಫ್  ಜೋಡಿ 102 ರನ್ ಗಳ ಜೊತೆಯಾಟವಾಡಿತ್ತು. ಇದು ಭಾರತದ ಪರ ಆಫ್ರಿಕಾದಲ್ಲಿ ಮೂಡಿಬಂದ ಈ ವರೆಗಿನ ಅತೀ  ಹೆಚ್ಚು ರನ್ ಗಳ ಜೊತೆಯಾಟ ಎಂದು ದಾಖಲಾಗಿತ್ತು. ಇದೀಗ ಈ ದಾಖಲೆಯನ್ನು ಕೊಹ್ಲಿ-ರಹಾನೆ ಜೋಡಿ ಮುರಿದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!