ಐಸಿಸಿ ಅಂಡರ್ 19 ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತದ ಸ್ಫೋಟಕ ಬ್ಯಾಟ್ಸ್ ಮನ್ ಮನ್ಜೋತ್ ಕಲ್ರ ಭರ್ಜರಿ ಶತಕ ಸಿಡಿಸಿದ್ದಾರೆ.
ನ್ಯೂಜಿಲೆಂಡ್ ನ ಬೇಓವಲ್ ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮನ್ಜೋತ್ ಕಲ್ರ ಭರ್ಜರಿ 3 ಸಿಕ್ಸರ್ ಮತ್ತು 8 ಬೌಂಡರಿ ಸೇರಿದಂತೆ 101 ಎಸೆತದಲ್ಲಿ 100 ರನ್ ಸಿಡಿಸಿದರು.
ಭಾರತ ಪರ ಆರಂಭಿಕರಾಗಿ ಕಣಕ್ಕಿಳಿದ ಮನ್ಜೋತ್ ಆರಂಭದಿಂದಲೂ ಸ್ಫೋಟಕ ಬ್ಯಾಟಿಂಗ್ ಮಾಡಿದ್ದು ತಂಡ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.