ಶಿಖರ್ ಧವನ್ 
ಕ್ರಿಕೆಟ್

4ನೇ ಪಂದ್ಯ: ಶತಕ ಸಿಡಿಸಿದ ಶಿಖರ್ ಧವನ್, ಬೆಳಕಿನ ಸಮಸ್ಯೆಯಿಂದ ಪಂದ್ಯ ಸ್ಥಗಿತ

ದಕ್ಷಿಣ ಆಫ್ರಿಕಾ ವಿರುದ್ಧದ ನಾಲ್ಕನೆ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸ್ ಮನ್ ಶಿಖರ್ ಧವನ್ ಅವರು ತಮ್ಮ 100ನೇ ಪಂದ್ಯದಲ್ಲೂ ಶತಕ ಸಿಡಿಸುವ....

ಜೊಹಾನ್ಸ್‌ಬರ್ಗ್‌: ದಕ್ಷಿಣ ಆಫ್ರಿಕಾ ವಿರುದ್ಧದ ನಾಲ್ಕನೆ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸ್ ಮನ್ ಶಿಖರ್ ಧವನ್ ಅವರು ತಮ್ಮ 100ನೇ ಪಂದ್ಯದಲ್ಲೂ ಶತಕ ಸಿಡಿಸುವ ಮೂಲಕ ಹೊಸ ದಾಖಲೆ ಮಾಡಿದ್ದಾರೆ. ಈ ಮೂಲಕ 100ನೇ ಪಂದ್ಯದಲ್ಲಿ ಶತಕ ಭಾರಿಸಿದ ಭಾರತದ ಮೊದಲ ಹಾಗೂ ವಿಶ್ವದ 9ನೇ ಬ್ಯಾಟ್ಸ್'ಮನ್ ಎನ್ನುವ ಕೀರ್ತಿಗೆ ಶಿಖರ್ ಧವನ್ ಪಾತ್ರರಾಗಿದ್ದಾರೆ.
ನಾಯಕ ವಿರಾಟ್ ಕೊಹ್ಲಿ ಹಾಗೂ ಧವನ್ ಅಜೇಯ ಶತಕದ ನೆರವಿನಿಂದ ಟೀಂ ಇಂಡಿಯಾ ಉತ್ತಮ ಸ್ಥಿತಿಯಲ್ಲಿದೆ. ಸದ್ಯ ಬೆಳಕಿನ ಸಮಸ್ಯೆಯಿಂದ ಪಂದ್ಯ ಸ್ಥಗಿತವಾಗಿದ್ದು, ಭಾರತ 34.2 ಓವರ್'ಗಳಲ್ಲಿ 2 ವಿಕೆಟ್ ನಷ್ಟಕ್ಕೆ 200 ರನ್ ಗಳಿಸಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಟೀಂ ಇಂಡಿಯಾಗೆ ರೋಹಿತ್ ಶರ್ಮಾ ಮತ್ತೊಮ್ಮೆ ನಿರಾಸೆ ಉಂಟು ಮಾಡಿದರು. ತಂಡದ ಮೊತ್ತ 20 ರನ್'ಗಳಿದ್ದಾಗ ಶರ್ಮಾ(5) ರಬಾಡ ಬೌಲಿಂಗ್'ನಲ್ಲಿ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿದರು. ಈ ವೇಳೆ ಜತೆಯಾದ ಧವನ್-ಕೊಹ್ಲಿ ಜೋಡಿ ದಿಟ್ಟವಾಗಿ ಆಫ್ರಿಕಾ ಬೌಲರ್'ಗಳನ್ನು ಎದುರಿಸಿತು.
2010ರಲ್ಲಿ ಟೀಂ ಇಂಡಿಯಾ ಸೇರಿಕೊಂಡ ಶಿಖರ್‌ ಧವನ್ ಇದುವವರೆ ಆಡಿದ 99 ಪಂದ್ಯಗಳಲ್ಲಿ 45.65 ಸರಾಸರಿಯೊಂದಿಗೆ 4,200 ರನ್‌ ಗಳಿಸಿದ್ದಾರೆ. ಇದರಲ್ಲಿ 12 ಆಕರ್ಷಕ ಶತಕಗಳು ಮತ್ತು 25 ಅರ್ಧ ಶತಕಗಳನ್ನು ಗಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!