ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧ ಭರ್ಜರಿ ಶತಕ ಸಿಡಿಸಿದ್ದಾರೆ.
ಪೋರ್ಟ್ ಎಲಿಜಬೆತ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐದನೇ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ 107 ಎಸತೆಗಳಲ್ಲಿ 4 ಭರ್ಜರಿ ಸಿಕ್ಸರ್ 10 ಬೌಂಡರಿ ಸೇರಿದಂತೆ ಶತಕ(101) ಸಿಡಿಸಿ ಮೂಲಕ 17ನೇ ಏಕದಿನ ಶತಕ ಪೂರೈಸಿದರು.
ಆಫ್ರಿಕಾ ವಿರುದ್ಧದ ಮೊದಲ ನಾಲ್ಕು ಪಂದ್ಯಗಳಲ್ಲಿ ರೋಹಿತ್ ಶರ್ಮಾ ಅಲ್ಪಮೊತ್ತಕ್ಕೆ ಔಟಾಗಿದ್ದು ಟೀಕೆಗೆ ಗುರಿಯಾಗಿದ್ದರು. ಐದನೇ ಪಂದ್ಯದಲ್ಲಿ ರನ್ ಪೇರಿಸಬೇಕಾದ ಅನಿವಾರ್ಯತೆ ಎದುರಾಗಿತ್ತು.