ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ
ಪೋರ್ಟ್ ಎಲೆಜಬೆತ್: ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಐದನೇ ಏಕದಿನ ಪಂದ್ಯದಲ್ಲಿ ಆರಂಭಿಕ ಆಟಗಾರ ರೋಹಿತ್ ಶರ್ಮಾ ತಂಡದ ನಾಯಕ ವಿರಾಟ್ ಕೊಹ್ಲಿಯನ್ನು ರನ್‌ಔಟ್ ಮಾಡಿದ್ದು ಇದಕ್ಕೆ ಟ್ವೀಟರಿಗರು ಕಾಲೆಳೆದಿದ್ದಾರೆ.
ಈ ಹಿಂದೆ ಹಲವು ಬಾರಿ ರೋಹಿತ್ ಶರ್ಮಾ ವಿರಾಟ್ ಕೊಹ್ಲಿಯನ್ನು ರನ್‌ಔಟ್ ಮಾಡಿದ್ದರು. ಇದೀಗ ಮತ್ತೆ ರನ್‌ಔಟ್ ಮಾಡಿರುವುದಕ್ಕೆ ಟ್ವೀಟರಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದಕ್ಷಿಣ ಆಫ್ರಿಕಾದ ಪೋರ್ಟ್ ಎಲಿಜಬೆತ್ ನಲ್ಲಿ ನಡೆಯುತ್ತಿರುವ ಭಾರತ-ದಕ್ಷಿಣ ಆಫ್ರಿಕಾ ನಡುವಿನ 5ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಇದರೊಂದಿಗೆ ಬ್ಯಾಟಿಂಗ್ ಇಳಿದ ಟೀಂ ಇಂಡಿಯಾ 274 ರನ್ ಗಳನ್ನು ಪೇರಿಸಿದ್ದು ಆಫ್ರಿಕಾಗೆ ಗೆಲ್ಲಲು 275 ರನ್ ಗುರಿ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics