ರೋಹಿತ್ ಶರ್ಮಾ 
ಕ್ರಿಕೆಟ್

ಶತಕವನ್ನು ಪತ್ನಿಗೆ ವ್ಯಾಲೆಂಟೈನ್ಸ್ ಉಡುಗೊರೆಯಾಗಿ ಕೊಟ್ಟ ರೋಹಿತ್ ಶರ್ಮಾ!

ದಕ್ಷಿಣ ಆಫ್ರಿಕಾ ವಿರುದ್ಧದ ಕ್ರಿಕೆಟ್ ಸರಣಿಯಲ್ಲಿ ಏಕದಿನ ಸರಣಿ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಭಾರತ ತಂಡದ ಆಟಗಾರ ರೋಹಿತ್ ಶರ್ಮಾ.........

ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧದ ಕ್ರಿಕೆಟ್ ಸರಣಿಯಲ್ಲಿ ಏಕದಿನ ಸರಣಿ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಭಾರತ ತಂಡದ ಆಟಗಾರ ರೋಹಿತ್ ಶರ್ಮಾ ಐದನೇ ಏಕದಿನದಲ್ಲಿ ಶತಕ ಸಿಡಿಸಿ ಗಮನ ಸೆಳೆದಿದ್ದರು.  ಅವರು ಆಫ್ರಿಕಾ ನೆಲದಲ್ಲಿ ಅತಿಥೇಯರ ವಿರುದ್ಧ ಗಳಿಸಿದ್ದ ಚೊಚ್ಚಲ ಶತಕ ಇದಾಗಿತ್ತು. ಈ ಸಾಧನೆಗಾಗಿ ಅವರು ನಿನ್ನೆಯ ಪಂದ್ಯದಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು.
ಹೀಗೆ ತಾವು ಶ್ರೇಷ್ಠ ಪ್ರದರ್ಶನ ನಿಡಿ ಗಳಿಸಿದ ಪ್ರಶಸ್ತಿಯನ್ನು ರೋಹಿತ್ ಶರ್ಮಾ ತಮ್ಮ ಪತ್ನಿಗೆ ವ್ಯಾಲೆಂಟೈನ್ಸ್ ದಿನದ ಉಡುಗೊರೆಯಾಗಿ ನೀಡಿದ್ದಾರೆ..
ಆರು ಪಂದ್ಯಗಳ ಸರಣಿಯನ್ನು ಇನ್ನೊಂದು ಪಂದ್ಯ ಉಳಿದಂತೆಯೇ ಕೈವಶ ಮಾಡಿಕೊಂಡಿರುವ ವಿರಾಟ್ ಕೊಹ್ಲಿ ಬಳಗದಲ್ಲಿ ಸ್ಥಾನ ಗಳಿಸಿದ್ದ ರೋಹಿತ್ ಕಡೆಗೂ ಉತ್ತಮ ಆಟ ಪ್ರದರ್ಶಿಸುವಲ್ಲಿ ಯಶಸ್ವಿಯಾಗಿದ್ದರು. ನಿನ್ನೆಯ ಪಂದ್ಯದಲ್ಲಿ ಹನ್ನೊಂದು ಬೌಂಡರಿ ಹಾಗೂ ನಾಲ್ಕು ಸಿಕ್ಸರ್ ಗಳೂ ಸೇರಿ 115 ರನ್ ಗಳಿಸಿದ್ದರು. ಪಂದ್ಯ್ ಶ್ರೇಷ್ಠ ಪ್ರಶಸ್ತಿ ಪುರಸ್ಕಾರಕ್ಕೆ ಪಾತ್ರರಾದ ರೋಹಿತ್ ತಮ್ಮ ಸಂತಸದ ಕ್ಷಣಗಳನ್ನು ಪತ್ನಿ ರಿತಿಕಾ ಅವರೊಡನೆ ಹಂಚಿಕೊಂಡಿದ್ದು ಅವರಿಗೆ ವ್ಯಾಲೆಂಟೈನ್ಸ್ ಡೇ ಶುಭ ಕೋರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!