ಪಂದ್ಯದ ಬಳಿಕ ಮಾತನಾಡಿದ ಕೊಹ್ಲಿ 
ಕ್ರಿಕೆಟ್

ಆಫ್ರಿಕಾ ನೆಲದಲ್ಲಿ ಐತಿಹಾಸಿಕ ಸರಣಿ ಜಯ ಅದ್ಬುತ ಅನುಭವ ನೀಡಿದೆ: ವಿರಾಟ್ ಕೊಹ್ಲಿ

ದಕ್ಷಿಣ ಆಫ್ರಿಕಾ ನೆಲದಲ್ಲಿ ಭಾರತ ತಂಡ ಐತಿಹಾಸಿಕ ಸರಣಿ ಗೆಲುವು ಸಾಧಿಸಿರುವುದು ನನಗೆ ವಿಶೇಷ ಅನುಭವ ನೀಡಿದೆ ಎಂದು ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.

ಪೋರ್ಟ್ ಎಲಿಜೆಬೆತ್: ದಕ್ಷಿಣ ಆಫ್ರಿಕಾ ನೆಲದಲ್ಲಿ ಭಾರತ ತಂಡ ಐತಿಹಾಸಿಕ ಸರಣಿ ಗೆಲುವು ಸಾಧಿಸಿರುವುದು ನನಗೆ ವಿಶೇಷ ಅನುಭವ ನೀಡಿದೆ ಎಂದು ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.
ನಿನ್ನೆ ಪೋರ್ಟ್ ಎಲಿಜೆಬೆತ್ ನಲ್ಲಿ ನಡೆದ 5ನೇ ಏಕದಿನ ಪಂದ್ಯದಲ್ಲಿ ಆಫ್ರಿಕಾ ತಂಡವನ್ನು 73 ರನ್ ಗಳ ಅಂತರದಲ್ಲಿ ಮಣಿಸಿದ ಭಾರತ ತಂಡ 6 ಪಂದ್ಯಗಳ ಏಕದಿನ ಸರಣಿಯನ್ನು ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ 4-1  ಅಂತರದಲ್ಲಿ ಏಕದಿನ ಸರಣಿಯನ್ನು ತನ್ನ ಕೈವಶ ಮಾಡಿಕೊಂಡಿತು. ಪಂದ್ಯದ ಬಳಿಕ ಮಾತನಾಡಿದ ತಂಡದ ನಾಯಕ ವಿರಾಟ್ ಕೊಹ್ಲಿ, ನಿಜಕ್ಕೂ ಈ ಗೆಲುವು ವಿಶೇಷ ಅನುಭವ ನೀಡಿದೆ ಎಂದು ಹೇಳಿದ್ದಾರೆ.
ದಕ್ಷಿಣ ಆಫ್ರಿಕಾದಲ್ಲಿ ಇದು ನಮ್ಮ ಮೊದಲ ದ್ವಿಪಕ್ಷೀಯ ಸರಣಿ ಜಯವಾಗಿದ್ದು, ತಂಡದ ಪ್ರದರ್ಶನದ ಬಗ್ಗೆ ನಿಜಕ್ಕೂ ಹೆಮ್ಮೆ ಇದೆ. ಸರಣಿಯ ಅಂತಿಮ ಪಂದ್ಯವನ್ನೂ ಗೆಲ್ಲುವ ಮೂಲಕ ಸರಣಿಯನ್ನು 5-1 ಅಂತರದಲ್ಲಿ ಗೆಲುವು  ಸಾಧಿಸಬೇಕು ಎನ್ನುವುದು ನಮ್ಮ ಗುರಿಯಾಗಿದೆ. ಪ್ರಸ್ತುತ ಸರಣಿ ವಿಜಯ ಭಾರತ ತಂಡದ ಬೆಂಚ್ ಸ್ಟ್ರೆಂಥ್ ಪರೀಕ್ಷೆಗೆ ಅನುವು ಮಾಡಿಕೊಟ್ಟಿದೆ. ಮುಂದಿನ ಪಂದ್ಯಗಳಲ್ಲಿ ಭಾರತದ ಹೆಚ್ಚುವರಿ ಆಟಗಾರರ ಪ್ರದರ್ಶನಕ್ಕೆ ಅನುವು  ಮಾಡಿಕೊಡಲಿದೆ ಎಂದು ಹೇಳಿದರು.
17 ಜನರ ತಂಡದಲ್ಲಿ ಈ ವರೆಗೂ ಕೇವಲ 12 ಮಂದಿಯನ್ನು ಮಾತ್ರ ಬಳಕೆ ಮಾಡಿಕೊಳ್ಳಲಾಗಿದ್ದು, ಮುಂದಿನ ಪಂದ್ಯದಲ್ಲಿ ಉಳಿದ 5 ಆಟಗಾರರ ಹೇಗೆ ಬಳಕೆ ಮಾಡಿಕೊಳ್ಳಬೇಕು ಎಂಬುದರ ಕುರಿತು ಚಿಂತಿಸುತ್ತಿದ್ದೇನೆ. 5-1ರ  ಅಂತರದಲ್ಲಿ ಸರಣಿ ಜಯಿಸಬೇಕು ಎನ್ನುವುಗು ನನ್ನ ಆಸೆಯಾಗಿದೆ. ಈ ನಿಟ್ಟಿನಲ್ಲಿ ಹೆಚ್ಚುವರಿ ಆಟಗಾರರನ್ನು ಹೇಗೆ ಬಳಸಿಕೊಳ್ಳಬೇಕು ಎಂದು ಮುಂದೆ ನಿರ್ಧರಿಸುತ್ತೇವೆ ಎಂದು ಹೇಳಿದರು. ಅಂತೆಯೇ ಬ್ಯಾಟಿಂಗ್ ವೇಳೆ ಇನ್ನಿಂಗ್ಸ್  ನ ಅಂತಿಮ ಭಾಗದಲ್ಲಿ ನಾವು ಕೊಂಚ ಯಡವಿದ್ದು ನಿಜ. ನಾವು ಅಂದಾಜಿಸಿದ್ದಕ್ಕಿಂತ 30 ರನ್ ಗಳು ಕಡಿಮೆಯಾದವು ಎಂದು ಕೊಹ್ಲಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT