ಜೋಹಾನ್ಸ್ ಬರ್ಗ್: ಟೀಂ ಇಂಡಿಯಾದಿಂದ ದೂರ ಉಳಿದಿದ್ದ ಸ್ಫೋಟಕ ಬ್ಯಾಟ್ಸ್ ಮನ್ ಸುರೇಶ್ ರೈನಾ ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಆಯ್ಕೆಯಾಗಿದ್ದು ಇದೀಗ ನೆಟ್ ನಲ್ಲಿ ಸತತ ಅಭ್ಯಾಸದಲ್ಲಿ ತೊಡಗಿದ್ದಾರೆ.
12 ತಿಂಗಳ ನಂತರ ಮತ್ತೆ ತಂಡಕ್ಕೆ ಮರಳಿರುವ ರೈನಾ ಅಭ್ಯಾಸದ ನಂತರ ಮಾತನಾಡಿದ್ದು ಮೊದಲ ಬಾರಿಗೆ ಟೀಂ ಇಂಡಿಯಾ ಜೆರ್ಸಿ ಧರಿಸುತ್ತಿರುವುದಾಗಿ ಭಾಸವಾಗುತ್ತಿದೆ ಎಂದರು.
ರೈನಾ ಟೀಂ ಇಂಡಿಯಾ ಪರ ಕಳೆದ ವರ್ಷ ಫೆಬ್ರವರಿಯಲ್ಲಿ ಇಂಗ್ಲೆಂಡ್ ವಿರುದ್ಧ ಆಡಿದ್ದರು. ಕಳೆದ ಕೆಲ ದೇಶಿ ಟೂರ್ನಿಗಳಲ್ಲಿ ಉತ್ತಮ ಪ್ರದರ್ಶನ ನೀಡಿರುವುದರಿಂದ ಅವರು ಟಿ20 ಸರಣಿಗೆ ಆಯ್ಕೆಯಾಗಿದ್ದರು.
ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿ ಇಂದಿನಿಂದ ಪ್ರಾರಂಭಗೊಳ್ಳಲಿದೆ.