ಟಾಸ್ ಗೆದ್ದ ದಕ್ಷಿಣ ಆಫ್ರಿಕಾ 
ಕ್ರಿಕೆಟ್

ಭಾರತದ ವಿರುದ್ಧದ ಮೊದಲ ಟಿ20 ಪಂದ್ಯ: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬೌಲಿಂಗ್ ಆಯ್ಕೆ

ನ್ಯೂ ವಾಂಡರರ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಜೊಹಾನ್ಸ್ ಬರ್ಗ್: ನ್ಯೂ ವಾಂಡರರ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಜೊಹಾನ್ಸ್ ಬರ್ಗ್ ನ ನ್ಯೂ ವಾಂಡರರ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಮೊದಲು ಬ್ಯಾಟಿಂಗ್ ಮಾಡುವಂತೆ ಅಹ್ವಾನ  ನೀಡಿದೆ.
ಈಗಾಗಲೇ 6 ಪಂದ್ಯಗಳ ಏಕದಿನ ಸರಣಿಯನ್ನು 5-1ರ ಅಂತರದಲ್ಲಿ ಹೀನಾಯವಾಗಿ ಸೋತಿರುವ ದಕ್ಷಿಣ ಆಫ್ರಿಕಾ ತಂಡ ಮೂರು ಪಂದ್ಯಗಳ ಟಿ20 ಸರಣಿಯನ್ನು ಗೆದ್ದು ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ. ಇನ್ನು ಏಕದಿನ ಸರಣಿ  ಗೆದ್ದಿರುವ ಭಾರತ ತಂಡ ಆತ್ಮವಿಶ್ವಾಸದಲ್ಲಿರುವ ಭಾರತ ಟಿ20 ಸರಣಿಯನ್ನೂ ಗೆಲ್ಲುವ ಮೂಲಕ ಯಶಸ್ವಿಯಾಗಿ ಭಾರತಕ್ಕೆ ವಾಪಸ್ ಆಗುವ ತವಕದಲ್ಲಿದೆ. ಇನ್ನು ಸರಣಿಗೂ ಮೊದಲೇ ಆಪ್ರಿಕಾಗೆ ಆಘಾತ ಎದುರಾಗಿದ್ದು, ತಂಡದ  ಸ್ಫೋಟಕ ಬ್ಯಾಟ್ಸಮನ್ ಎಬಿಡಿವಿಲಿಯರ್ಸ್ ಗಾಯಗೊಂಡು ತಂಡದಿಂದ ಹೊರಗುಳಿದಿದ್ದಾರೆ. 
ಇಂದಿನ ಪಂದ್ಯದಲ್ಲಿ ಡಿವಿಲಿಯರ್ಸ್ ಅಲಭ್ಯರಾಗಿದ್ದು, ಮುಂದಿನ ಪಂದ್ಯಕ್ಕೆ ಮರಳುವ ವಿಶ್ವಾಸವಿದೆ. ಭಾರತ ತಂಡದಲ್ಲಿ ಕನ್ನಡಿಗ ಮನೀಷ್ ಪಾಂಡೆ ವೇಗಿ ಉನಾದ್ಕತ್ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷಕ್ಕೆ ಮುಜುಗರ ತಪ್ಪಿಸಲು ಸಚಿವ ಬಿ ನಾಗೇಂದ್ರ ರಾಜೀನಾಮೆ; ಸುಳ್ಳೇ ಬಿಜೆಪಿ ಮನೆ ದೇವರು: CM DK Shivakumar

ಡಿಕೆಶಿ ಸರ್ಕಾರದ ಮೊದಲ ವಿಕೆಟ್ ಪತನ: ಕಣ್ಣೀರಿಡುತ್ತಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ನಾಗೇಂದ್ರ; BJP ಹೋರಾಟಕ್ಕೆ ಜಯ! Video

ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ; ಬನ್ನಿ ಅಖಾಡಕ್ಕೆ, ಬಳ್ಳಾರಿಯಲ್ಲಿ ನೀವು ರಿಜೆಕ್ಟ್ ಪೀಸ್‌ಗಳು: ರಾಮುಲು, ರೆಡ್ಡಿಗೆ ನಾಗೇಂದ್ರ ಸವಾಲು

Toxic: ಇಂತಹ ವಿಭಿನ್ನ ಸಿನಿಮಾ ಮಾಡಲು ಗಟ್ಸ್ ಬೇಕು; ಯಶ್ ಹಾಡಿ ಹೊಗಳಿದ ಕಿಚ್ಚ ಸುದೀಪ್!

ರಕ್ಷಾ ಬಂಧನ: ವಿರಾಟ್ ಕೊಹ್ಲಿ ಸಹೋದರಿಯ ಪೋಸ್ಟ್; ಫೋಟೋ ವೈರಲ್!