ವಿರಾಟ್ ಕೊಹ್ಲಿ-ಹಾಶೀಂ ಆಮ್ಲಾ
ಹೈದರಾಬಾದ್: ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ದಾಖಲೆಗಳ ಸರಮಾಲೆ ಸೃಷ್ಟಿಸುತ್ತಿರುವ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಕ್ರಿಕೆಟ್ ನ ಎಲ್ಲಾ ಮಾದರಿಯಲ್ಲೂ ವೇಗವಾಗಿ 17 ಸಾವಿರ ರನ್ ಪೂರೈಸಿದ್ದಾರೆ.
ವೇಗವಾಗಿ 17 ರನ್ ಪೂರೈಸುವ ಮೂಲಕ ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾದ ಆರಂಭಿಕ ಆಟಗಾರ ಹಾಶೀಂ ಆಮ್ಲಾ ದಾಖಲೆಯನ್ನು ಧೂಳಿಪಟ ಮಾಡಿದ್ದಾರೆ.
ಕಳೆದ ವರ್ಷ ದಕ್ಷಿಣ ಆಫ್ರಿಕಾದ ಆಟಗಾರ ಹಾಶೀಂ ಆಮ್ಲಾ ವೇಗವಾಗಿ 17 ಸಾವಿರ ರನ್ ಪೂರೈಸಿದ ಮೊದಲ ಆಟಗಾರ ಎಂಬ ಖ್ಯಾತಿಗೆ ಭಾಜನರಾಗಿದ್ದರು. ಇದಕ್ಕಾಗಿ ಆಮ್ಲಾ 381 ಇನ್ನಿಂಗ್ಸ್ ತೆಗೆದುಕೊಂಡಿದ್ದರು. ಆದರೆ ಇದೀಗ ವಿರಾಟ್ ಕೊಹ್ಲಿ ಕೇವಲ 363 ಇನ್ನಿಂಗ್ಸ್ ನಲ್ಲಿ 17 ಸಾವಿರ ರನ್ ಗಳ ಗಡಿ ದಾಟಿದ್ದಾರೆ.
ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ 9588 ರನ್ ಗಳನ್ನು ಕಲೆ ಹಾಕಿದ್ದಾರೆ. ಟೆಸ್ಟ್ ನಲ್ಲಿ 5554 ರನ್ ಗಳಿಸಿರುವ ಕೊಹ್ಲಿ ಟಿ20 ಪಂದ್ಯಗಳಲ್ಲಿ 1956 ರನ್ ಗಳಿಸಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos