ಕಳೆದ ವರ್ಷ ಐಪಿಎಲ್ ಟ್ರೋಫಿ ಗೆದ್ದ ಮುಂಬೈ ಇಂಡಿಯನ್ಸ್ ತಂಡ 
ಕ್ರಿಕೆಟ್

ಐಪಿಎಲ್ 2018: ರೋಹಿತ್ ಶರ್ಮಾ, ಪಾಂಡ್ಯ ಸಹೋದರರನ್ನು ಉಳಿಸಿಕೊಳ್ಳಲು ಮುಂಬೈ ಇಂಡಿಯನ್ಸ್ ಸಿದ್ಧತೆ

2018ರ ಐಪಿಎಲ್ ಹರಾಜು ಪ್ರಕ್ರಿಯೆ ಜನವರಿ 27ರಂದು ನಿಗದಿಯಾಗಿದ್ದು, ಇತ್ತೀಚಿನ ಸರಣಿಗಳಲ್ಲಿ ಉತ್ತಮ ಆಟ ಪ್ರದರ್ಶಿಸುತ್ತಿರುವ ರೋಹಿತ್...

ನವದೆಹಲಿ: 2018ರ ಐಪಿಎಲ್ ಹರಾಜು ಪ್ರಕ್ರಿಯೆ ಜನವರಿ 27ರಂದು ನಿಗದಿಯಾಗಿದ್ದು, ಇತ್ತೀಚಿನ ಸರಣಿಗಳಲ್ಲಿ ಉತ್ತಮ ಆಟ ಪ್ರದರ್ಶಿಸುತ್ತಿರುವ ರೋಹಿತ್ ಶರ್ಮಾ ಹಾಗೂ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಮತ್ತು ಕೃನಾಲ್ ಪಾಂಡ್ಯ ಅವರನ್ನು ತಂಡದಲ್ಲಿ ಉಳಿಸಿಕೊಳ್ಳಲು ಮುಂಬೈ ಇಂಡಿಯನ್ಸ್ ಸಕಲ ಸಿದ್ಧತೆ ನಡೆಸಿದೆ. 
ಇನ್ನು ದೆಹಲಿ ಡೇರ್ ಡೆವಿಲ್ಸ್ ತಂಡ ಸಹ ರಿಷಭ್ ಪಂತ್ ಹಾಗೂ ಶ್ರೇಯಸ್ ಐಯ್ಯರ್ ಅವರನ್ನು ಉಳಿಸಿಕೊಳ್ಳುವ ಸಾಧ್ಯತೆ ಇದೆ 
ಆಟಗಾರರನ್ನು ತಂಡದಲ್ಲೇ ಉಳಿಸಿಕೊಳ್ಳುವ ಬಗ್ಗೆ ಮನವಿ ಸಲ್ಲಿಸಲು ಜನವರಿ 4 ಕೊನೆಯ ದಿನವಾಗಿದ್ದು, ಫ್ರಾಂಚೈಸಿಗಳು ತಾವು ಉಳಿಸಿಕೊಳ್ಳಲು ಇಷ್ಟಪಡುವ ಆಟಗಾರರ ಬಗ್ಗೆ ಇದುವರೆಗೂ ಅಧಿಕೃತ ಮಾಹಿತಿ ನೀಡಿಲ್ಲ.
ಕಳೆದ ಮೂರು ಐಪಿಎಲ್ ಆವೃತ್ತಿಯಲ್ಲೂ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಿರುವ ರೋಹಿತ್ ಶರ್ಮಾ ಅವರು ಸಹಜವಾಗಿಯೇ ಈ ಬಾರಿಯೂ ಅವರೇ ನಾಯಕರಾಗಿ ಮುಂದುವರೆಯಲಿದ್ದಾರೆ. ಇನ್ನು ಹಾರ್ದಿಕ್ ಪಾಂಡ್ಯ ಒಬ್ಬ ಬಿಗ್ ಮ್ಯಾಚ್ ವಿನ್ನರ್ ಆಗಿದ್ದು ಅವರನ್ನು ಮತ್ತು ಅವರ ಸಹೋದರ ಕೃನಾಲ್ ನನ್ನು ಉಳಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹಾರ್ದಿಕ್ ಪಾಂಡ್ಯ ಈಗಾಗಲೇ ಮುಂಬೈ ಇಂಡಿಯನ್ಸ್ ತಂಡವನ್ನು ಪ್ರತಿನಿಧಿಸುತ್ತಿದ್ದು, ಟೀಂ ಇಂಡಿಯಾ ಪರವಾಗಿ ಪಾಂಡ್ಯ ಇತ್ತೀಚಿನ ಸರಣಿಗಳಲ್ಲಿ ನೀಡಿರುವ ಉತ್ತಮ ಪ್ರದರ್ಶನ ಐಪಿಎಲ್ ಸೀಸನ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಪ್ಲಸ್ ಪಾಯಿಂಟ್ ಆಗಲಿದ್ದು ಇದೇ ಕಾರಣಕ್ಕೆ ತಂಡದಲ್ಲೇ ಉಳಿಸಿಕೊಳ್ಳುವ ಯತ್ನ ನಡೆದಿದೆ.
ಹಾರ್ದಿಕ್ ಪಾಂಡ್ಯ ಅವರ ಹಿರಿಯ ಸಹೋದರ ಕೃನಾಲ್ ಪಾಂಡ್ಯ ಅವರ ತಂಡಕ್ಕೆ ಸೇರಿಸಿಕೊಳ್ಳಲು 2 ಕೋಟಿ ಖರ್ಚು ಮಾಡಿದ್ದ ತಂಡ ಈಗ ಹಾರ್ದಿಕ್ ಪಾಂಡ್ಯಾ ಅವರಿಗೆ ಮತ್ತಷ್ಟು ಆಕರ್ಷಕ ಆಫರ್ ನೀಡಬೇಕಾಗಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

SCROLL FOR NEXT