ಕೇಪ್ ಟೌನ್: ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ಗಾಯಗೊಂಡಿರುವುದರಿಂದ ದಕ್ಷಿಣ ಆಫ್ರಿಕಾದ ಮೊದಲ ಟೆಸ್ಟ್ ಪಂದ್ಯದಲ್ಲಿ ಕೆಎಲ್ ರಾಹುಲ್ ಮತ್ತು ಮುರಳಿ ವಿಜಯ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ.
ಶಿಖರ್ ಧವನ್ ಅವರ ಎಡ ಮೊಣಕಾಲಿಗೆ ಗಾಯವಾಗಿದೆ. ದಕ್ಷಿಣ ಆಫ್ರಿಕಾ ಪ್ರವಾಸಕ್ಕೂ ಮುನ್ನ ಧವನ್ ಟೀಂ ಹೋಟೆಲ್ ಗೆ ಫಿಸಿಯೋ ಪ್ಯಾಟ್ರಿಕ್ ಫರ್ಹಾಟ್ ಜತೆಗೂಡಿ ಆಗಮಿಸಿದ್ದರು. ಬಳಿಕ ಎಂಆರ್ಐ ಸ್ಕ್ಯಾನ್ ಗೂ ಒಳಗಾದರು. ಹೀಗಾಗಿ ಧವನ್ ಬದಲು ಕೆಎಲ್ ರಾಹುಲ್ ಇನ್ನಿಂಗ್ಸ್ ಪ್ರಾರಂಭಿಸಲಿದ್ದಾರೆ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ.
ಈ ಹಿಂದೆ ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಅವರು ಧವನ್ ಗಾಯ ಗುಣವಾಗದೆ ಹೊರ ನಡೆದರೆ ಅವರ ಬದಲಿಗೆ ಕೆಎಲ್ ರಾಹುಲ್ ಮತ್ತು ಮುರಳಿ ವಿಜಯ್ ಇನ್ನಿಂಗ್ಸ್ ಪ್ರಾರಂಭಿಸಲಿದ್ದಾರೆ ಎಂದು ಹೇಳಿದ್ದರು.
ಜನವರಿ 5ರಿಂದ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಆರಂಭಗೊಳ್ಳಲಿದೆ. ಆಫ್ರಿಕಾ ವಿರುದ್ಧ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಭಾರತ ಆಡಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics