ಕೇಪ್ ಟೌನ್: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಜನವರಿ 5ರಿಂದ ಪ್ರಾರಂಭವಾಗುತ್ತಿದ್ದು ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಶಿಖರ್ ಧವನ್ ಇದೀಗ ಫಿಟ್ ಆಗಿದ್ದು ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ.
ದಕ್ಷಿಣ ಆಫ್ರಿಕಾ ಪ್ರವಾಸಕ್ಕೂ ಮುನ್ನ ಶಿಖರ್ ಧವನ್ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದರು. ಧವನ್ ಅವರ ಎಡ ಮೊಣಕಾಲಿಗೆ ಗಾಯವಾಗಿದ್ದು ಈ ಸಂಬಂಧ ಎಂಆರ್ಐ ಸ್ಕ್ಯಾನ್ ಗೂ ಸಹ ಒಳಗಾಗಿದ್ದರು. ಇದೀಗ ಅವರು ಸಂಪೂರ್ಣವಾಗಿ ಫಿಟ್ ಆಗಿದ್ದು ನ್ಯೂಲ್ಯಾಂಡ್ಸ್ ನಲ್ಲಿ ನಡೆಯಲಿರುವ ಆರಂಭಿಕ ಟೆಸ್ಟ್ ಪಂದ್ಯದಲ್ಲಿ ಮುರಳಿ ವಿಜಯ್ ಜತೆ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ.
ಸದ್ಯ ಶಿಖರ್ ಧವನ್ ಸಂಪೂರ್ಣವಾಗಿ ಫಿಟ್ ಆಗಿದ್ದು ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಅವರು ಆರಂಭಿಕರಾಗಿ ಕಣಕ್ಕಳಿಯಲಿದ್ದಾರೆ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ.
ಇನ್ನು ಟೀಂ ಇಂಡಿಯಾದ ಖ್ಯಾತ ಸ್ಪಿನ್ನರ್ ರವೀಂದ್ರ ಜಡೇಜಾ ಅವರು ಕಳೆದ ಎರಡು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಅವರಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಮುಂದಿನ 48 ಗಂಟೆಗಳಲ್ಲಿ ಅವರು ಸಂಪೂರ್ಣವಾಗಿ ಗುಣಮುಖರಾಗದಿದ್ದರೆ ಅವರ ಬದಲಿಗೆ ಬೇರೆ ಆಟಗಾರರನ್ನು ಕಣಕ್ಕಿಳಿಸಲಾಗುವುದು ಎಂದು ಬಿಸಿಸಿಐ ಹೇಳಿದೆ.
ಶಿಖರ್ ಧವನ್ ಗಾಯಗೊಂಡಿದ್ದರಿಂದ ಟೀಂ ಇಂಡಿಯಾದ ಆಟಗಾರ ಕೆಎಲ್ ರಾಹುಲ್ ಆರಂಭಿಕರಾಗಿ ಕಣಕ್ಕಿಳಿಯುತ್ತಾರೆ ಎಂದು ಹೇಳಲಾಗಿತ್ತು. ಆದರೆ ಇದೀಗ ಧವನ್ ಚೇತರಿಸಿಕೊಂಡಿದ್ದು ಕೆಎಲ್ ರಾಹುಲ್ ಗೆ ಅವಕಾಶ ತಪ್ಪಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics