ವೀರೇಂದ್ರ ಸೆಹ್ವಾಗ್ 
ಕ್ರಿಕೆಟ್

ಆಫ್ರಿಕಾ ವಿರುದ್ಧ ಭಾರತ ತಂಡ ಫಾರ್ಮ್ ಗೆ ಬರುವ ಸಾಧ್ಯತೆ ಶೇ.30ರಷ್ಟು ಮಾತ್ರ: ಸೆಹ್ವಾಗ್

ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೊದಲ ಪಂದ್ಯವನ್ನು ಟೀಂ ಇಂಡಿಯಾ ಕೈಚೆಲ್ಲಿದ್ದು ಸರಣಿಯಲ್ಲಿ ಭಾರತ ಪುಟಿದೇಳಲು ಕೇವಲ..

ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೊದಲ ಪಂದ್ಯವನ್ನು ಟೀಂ ಇಂಡಿಯಾ ಕೈಚೆಲ್ಲಿದ್ದು ಸರಣಿಯಲ್ಲಿ ಭಾರತ ಪುಟಿದೇಳಲು ಕೇವಲ 30ರಷ್ಟು ಮಾತ್ರ ಅವಕಾಶವಿದೆ ಎಂದು ಟೀಂ ಇಂಡಿಯಾದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಅಭಿಪ್ರಾಯಪಟ್ಟಿದ್ದಾರೆ. 
ಇನ್ನು ಎರಡು ಟೆಸ್ಟ್ ಪಂದ್ಯಗಳು ಮಾತ್ರ ಭಾರತ ಉಳಿದಿದ್ದು ಈ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಬೇಕಿದೆ. ಆದರೆ ಸದ್ಯದ ಪರಿಸ್ಥಿತಿ ನೋಡಿದರೇ ಭಾರತ ಪುಟಿದೇಳಲು ಕೇವಲ 30ರಷ್ಟು ಮಾತ್ರ ಅವಕಾಶವಿದೆ. ಸೆಂಚುರಿಯನ್ ನಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ಗೆ ತಂಡದ ಆಡಳಿತ ಮಂಡಳಿ ಅವಕಾಶ ನೀಡುತ್ತದೆಯೇ ಎಂದು ಕಾದು ನೋಡಬೇಕು ಎಂದು ಸೆಹ್ವಾಗ್ ಇಂಡಿಯಾ ಟಿವಿಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. 
ಭಾರತ ತಂಡದಲ್ಲಿ ಆರು ಪರಿಣಿತ ಬ್ಯಾಟ್ಸ್ ಮನ್ ಮತ್ತು ನಾಲ್ವರು ಬೌಲರ್ ಗಳು ಇದ್ದರೆ ಮುಂದಿನ ಪಂದ್ಯದಲ್ಲಿ ಆಫ್ರಿಕಾಗೆ ಕಠಿಣ ಸವಾಲು ನೀಡಬಹುದು ಎಂದು ಸೆಹ್ವಾಗ್ ಅಭಿಪ್ರಾಯಪಟ್ಟಿದ್ದಾರೆ. 
ಭಾರತ ತಂಡ ಅಜಿಂಕ್ಯ ರಹಾನೆಯನ್ನು ಹೆಚ್ಚುವರಿ ಬ್ಯಾಟ್ಸ್ ಮನ್ ಆಗಿ ತೆಗೆದುಕೊಳ್ಳಬೇಕಿದೆ. ಇನ್ನು ಪಂದ್ಯಗಳನ್ನು ಗೆಲ್ಲಬೇಕಾದರೆ ನಾಯಕ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾರ ಪಾತ್ರ ಬಹು ಮುಖ್ಯವಾಗಿದೆ ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!