ಮೆಲ್ಬರ್ನ್ ಕ್ರಿಕೆಟ್ ಮೈದಾನ 
ಕ್ರಿಕೆಟ್

ಮೆಲ್ಬರ್ನ್ ಕ್ರೀಡಾಂಗಣ 'ಕಳಪೆ ಪಿಚ್' ಐಸಿಸಿಯಿಂದ ಅಧಿಕೃತ ಎಚ್ಚರಿಕೆ

ಆಸ್ಟ್ರೇಲಿಯಾ ಮೆಲ್ಬರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಸಿದ್ದ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ನಡುವಿನ ಪ್ರತಿಷ್ಠಿತ ಆ್ಯಶಸ್ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯ ಡ್ರಾನಲ್ಲಿ...

ಮೆಲ್ಬರ್ನ್: ಆಸ್ಟ್ರೇಲಿಯಾ ಮೆಲ್ಬರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಸಿದ್ದ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ನಡುವಿನ ಪ್ರತಿಷ್ಠಿತ ಆ್ಯಶಸ್ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯ ಡ್ರಾನಲ್ಲಿ ಅಂತ್ಯವಾಗಿತ್ತು. ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಮೆಲ್ಬರ್ನ್ ಮೈದಾನವನ್ನು ಕಳಪೆ ಪಿಚ್ ಎಂದು ಅಧಿಕೃತ ಎಚ್ಚರಿಕೆಯನ್ನು ನೀಡಿದೆ. 
ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಿನ ಬಾಕ್ಸಿಂಗ್ ಡೇ ಟೆಸ್ಟ್ ಗಾಗಿ ನಿರ್ಜೀವ ಮೈದಾನವನ್ನು ಬಳಸಲಾಗಿತ್ತು ಎಂದು ಆಟಗಾರರು ಮತ್ತು ವಿಮರ್ಶಕರು ಟೀಕಿಸಿದರು. ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಮ್ಯಾಚ್ ರೆಫ್ರಿ ರಂಜನ್ ಮದುಗಾಲೆಯವರು ತಮ್ಮ ಅಧಿಕೃತ ವರದಿಯಲ್ಲಿ ಮೈದಾನದ ಕುರಿತಂತೆ ಕಳಪೆ ರೇಟಿಂಗ್ ನೀಡಿದ್ದರು. ಇನ್ನು ಈ ಕುರಿತಂತೆ ಹೇಳಿಕೆ ಬಿಡುಗಡೆ ಮಾಡಿರುವ ಐಸಿಸಿ ಮುಂದಿನ ದಿನಗಳಲ್ಲಿ ಪಿಚ್ ಅನ್ನು ಅಭಿವೃದ್ಧಿ ಪಡಿಸುವಂತೆ ಸೂಚಿಸಿದೆ. 
ಆಸ್ಟ್ರೇಲಿಯಾದಲ್ಲಿ ನಡೆದ ಟೆಸ್ಟ್ ಸರಣಿಗಳಲ್ಲಿ ಕಳಪೆ ರೇಟಿಂಗ್ ಪಡೆದ ಮೊದಲ ಪಂದ್ಯ ಹಾಗೂ ಮೊದಲ ಮೈದಾನ ಇದಾಗಿದೆ. ಇನ್ನು ಅಸ್ತಿತ್ವದಲ್ಲಿರುವ ಐಸಿಸಿ ನಿಯಮವಳಿಗಳ ಅಡಿಯಲ್ಲಿ ಐಸಿಸಿ ಅಧಿಕೃತ ಎಚ್ಚರಿಕೆ ನೀಡಿ ದಂಡವನ್ನು ಪಡೆಯಬಹುದು.
ಆಶಸ್ ಟೂರ್ನಿಯ ನಾಲ್ಕನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 327 ರನ್ ಗೆ ಆಲೌಟ್ ಆಗಿತ್ತು. ನಂತರ ಬ್ಯಾಟಿಂಗ್ ಮಾಡಿದ್ದ ಇಂಗ್ಲೆಂಡ್ 491 ರನ್ ಗೆ ಸರ್ವಪತನ ಕಂಡಿತ್ತು. ಬಳಿಕ ಎರಡನೇ ಇನ್ನಿಂಗ್ಸ್ ಪ್ರಾರಂಭಿಸಿದ ಆಸ್ಟ್ರೇಲಿಯಾ 4 ವಿಕೆಟ್ ನಷ್ಟಕ್ಕೆ 263 ರನ್ ಗಳಿಸಿದ್ದಾಗ ಪಂದ್ಯ ಡ್ರಾ ಆಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT