ಆಸಿಸ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ 
ಕ್ರಿಕೆಟ್

ಅಂಡರ್ 19 ಕ್ರಿಕೆಟ್ ವಿಶ್ವಕಪ್: ಪ್ರಬಲ ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ನ್ಯೂಜಿಲೆಂಡ್ ನಲ್ಲಿ ನಡೆಯುತ್ತಿರುವ ಅಂಡರ್ 19 ಕ್ರಿಕೆಟ್ ವಿಶ್ವಕಪ್ ನ ತನ್ನ ಚೊಚ್ಚಲ ಪಂದ್ಯದಲ್ಲಿ ಟೀಂ ಇಂಡಿಯಾ ಪ್ರಬಲ ಆಸ್ಟ್ರೇಲಿಯಾ ತಂಡದ ವಿರುದ್ಧ 100 ರನ್ ಗಳ ಭರ್ಜರಿ ಜಯ ಸಾಧಿಸಿದೆ.

ಬೇ ಓವಲ್: ನ್ಯೂಜಿಲೆಂಡ್ ನಲ್ಲಿ ನಡೆಯುತ್ತಿರುವ ಅಂಡರ್ 19 ಕ್ರಿಕೆಟ್ ವಿಶ್ವಕಪ್ ನ ತನ್ನ ಚೊಚ್ಚಲ ಪಂದ್ಯದಲ್ಲಿ ಟೀಂ ಇಂಡಿಯಾ ಪ್ರಬಲ ಆಸ್ಟ್ರೇಲಿಯಾ ತಂಡದ ವಿರುದ್ಧ 100 ರನ್ ಗಳ ಭರ್ಜರಿ ಜಯ ಸಾಧಿಸಿದೆ.
ಭಾರತ ನೀಡಿದ್ದ 329 ರನ್ ಗಳ ಗುರಿಯನ್ನು ಬೆನ್ನ ಹತ್ತಿದ ಆಸ್ಟ್ರೇಲಿಯಾ ತಂಡ 42.5 ಓವರ್ ಗಳಲ್ಲಿ 228 ರನ್ ಗಳಿಸಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು. ಆ ಮೂಲಕ ಭಾರತದ ವಿರುದ್ಧ 100 ರನ್ ಗಳ ಹೀನಾಯ ಸೋಲು  ಅನುಭವಿಸಿತು. ಆಸಿಸ್ ಪರ ಆರಂಭಿಕ ಆಟಗಾರ ಜಾಕ್ ಎಡ್ವರ್ಡ್ಸ್ (73 ರನ್) ಅವರನ್ನು ಹೊರತು ಪಡಿಸಿದರೆ ಉಳಿದ ಆಟಗಾರರು ಭಾರತಕ್ಕೆ ಪ್ರಬಲ ಉತ್ತರ ನೀಡುವಲ್ಲಿ ವಿಫಲರಾದರು. ಮಧ್ಯಮ ಕ್ರಮಾಂಕದಲ್ಲಿ ಜೋನಾಥನ್  ಮೆರ್ಲೋ ವಿಕೆಟ್ ಪತನವಾಗುತ್ತಿದ್ದಂತೆಯೇ ನಿಯಮಿತವಾಗಿ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದ ಆಸಿಸ್, 228 ರನ್ ಗಳಿಗೆ ಆಲೌಟ್ ಆಯಿತು.
ಇನ್ನು ಭಾರತದ ಪರ ಶಿಮಂ ಮಾವಿ ಮತ್ತು ಕಮಲೇಶ್ ನಗರ್ಕೋಟಿ ತಲಾ 3 ವಿಕೆಟ್ ಪಡೆದರೆ, ಸುಧಾಕರ್ ರಾಯ್, ಅಭಿಷೇಕ್ ಶರ್ಮಾ ತಲಾ 1 ವಿಕೆಟ್ ಪಡೆದರು. 
ಇದಕ್ಕೂ ಮೊದಲು ಟಾಸ್ ಗೆದ್ದ ಭಾರತ ತಂಡದ ನಾಯಕ ಪೃಥ್ವಿ ಚೌಹಾಣ್ (94 ರನ್), ಮನೋಜ್ ಕಲ್ರಾ (86 ರನ್) ಮತ್ತು ಶಬ್ ಮನ್ ಗಿಲ್ (63 ರನ್) ಅವರ ಉತ್ತಮ ಬ್ಯಾಟಿಂಗ್ ಪ್ರದರ್ಶನದಿಂದಾಗಿ ನಿಗದಿತ 50 ಓವರ್ ಗಳಲ್ಲಿ 7  ವಿಕೆಟ್ ನಷ್ಟಕ್ಕೆ 328 ರನ್ ಕಲೆಹಾಕಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!