ವಿರಾಟ್ ಕೊಹ್ಲಿ 
ಕ್ರಿಕೆಟ್

ಅಸಭ್ಯ ವರ್ತನೆ: ವಿರಾಟ್ ಕೊಹ್ಲಿಗೆ ಪಂದ್ಯದ ಸಂಭಾವನೆಯ ಶೇ.25ರಷ್ಟು ದಂಡ

ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ನ ಮೂರನೇ ದಿನ ದುರ್ವತನೆ ತೋರಿದ ಆರೋಪದ ಮೇಲೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರಿಗೆ ಐಸಿಸಿ ಪಂದ್ಯದ...

ಸೆಂಚೂರಿಯನ್: ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ನ ಮೂರನೇ ದಿನ ದುರ್ವತನೆ ತೋರಿದ ಆರೋಪದ ಮೇಲೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರಿಗೆ ಐಸಿಸಿ ಪಂದ್ಯದ ಅವರ ಸಂಭಾವನೆಯ ಶೇ.25ರಷ್ಟು ದಂಡ ವಿಧಿಸಿದೆ.
ದಕ್ಷಿಣಾ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ನ ಮೂರನೇ ದಿನ ಐಸಿಸಿ ನೀತಿ ಸಂಹಿತೆ ಉಲ್ಲಂಘಿಸಿದ ವಿರಾಟ್ ಕೊಹ್ಲಿ ಅವರಿಗೆ ಪಂದ್ಯದ ಸಂಭಾವನೆಯ ಶೇ.25ರಷ್ಟು ದಂಡ ವಿಧಿಸಲಾಗಿದೆ ಎಂದು ಐಸಿಸಿ ಪ್ರಕಟಣೆಯಲ್ಲಿ ತಿಳಿಸಿದೆ.
ದ.ಆಫ್ರಿಕಾ ದ್ವಿತೀಯ ಇನಿಂಗ್ಸ್ ಆಡುತ್ತಿದ್ದಾಗ ಮಳೆ ಬಂದು ಕೆಲ ಕಾಲ ಪಂದ್ಯ ಸ್ಥಗಿತಗೊಳಿಸಬೇಕಾಗಿ ಬಂತು. ಮತ್ತೆ ಪಂದ್ಯ ಆರಂಭವಾಗಿ 5 ಓವರ್ ಮುಗಿದಾಗ ಅಂಪಾಯರ್ ಗಳು ಮಂದ ಬೆಳಕಿನ ಕಾರಣ ನೀಡಿ ದಿನದಾಟ ನಿಲ್ಲಿಸಿದರು. ಇದರಿಂದ ಅಸಮಾಧಾನಗೊಂಡ ವಿರಾಟ್ ಕೊಹ್ಲಿ ಬಾಲ್ ಅನ್ನು ಜೋರಾಗಿ ಪಿಚ್ ಗೆ ಎಸೆದು ಅಂಪಾಯರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. 
ಭಾರತಕ್ಕೆ ಸರಣಿ ಉಳಿಸಿಕೊಳ್ಳಲು ಈ ಪಂದ್ಯ ಮಹತ್ವದ್ದಾಗಿದೆ. ಈ ಸಂದರ್ಭದಲ್ಲಿ ಆಟ ಸರಿಯಾಗಿ ಆಗದೇ ಇದ್ದಾಗ ಕೊಹ್ಲಿ ಅಸಮಾಧಾನಗೊಂಡರು. ಆಫ್ರಿಕಾ ದಿನದಂತ್ಯಕ್ಕೆ 2 ವಿಕೆಟ್ ನಷ್ಟಕ್ಕೆ 90 ರನ್ ಗಳಿಸಿತ್ತು. ಭಾರತ ಮೊದಲ ಇನಿಂಗ್ಸ್ ನಲ್ಲಿ 307 ರನ್ ಗಳಿಗೆ ಆಲೌಟ್ ಆಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!

ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ: 'ಸ್ಟಿಂಗ್ ಆಪರೇಷನ್' ಕುರಿತು ಸಿಎಂ DKS ಎಚ್ಚರಿಕೆ ಕರೆಗೆ ಸಚಿವರಿಂದ ಬೆಂಬಲ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್‌; ಇಬ್ಬರಿಗೂ ಕೋರ್ಟ್ ಸಮನ್ಸ್