ವಿರಾಟ್ ಕೊಹ್ಲಿ 
ಕ್ರಿಕೆಟ್

ಐಸಿಸಿ 2017ರ ವಾರ್ಷಿಕ ಪ್ರಶಸ್ತಿ: ವಿರಾಟ್ ಕೊಹ್ಲಿ ಮುಡಿಗೆ ವರ್ಷದ ಕ್ರಿಕೆಟಿಗ ಪ್ರಶಸ್ತಿ ಗರಿ

ಪ್ರತಿಷ್ಠಿತ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) 2017ರ ವಾರ್ಷಿಕ ಪ್ರಶಸ್ತಿ ಪ್ರಕಟವಾಗಿದ್ದು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅವರು ವರ್ಷದ ಕ್ರಿಕೆಟಿಗ ಎಂಬ...

ದುಬೈ: ಪ್ರತಿಷ್ಠಿತ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) 2017ರ ವಾರ್ಷಿಕ ಪ್ರಶಸ್ತಿ ಪ್ರಕಟವಾಗಿದ್ದು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅವರು ವರ್ಷದ ಕ್ರಿಕೆಟಿಗ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ. 
ವಿರಾಟ್ ಕೊಹ್ಲಿ ಅವರು ಐಸಿಸಿ ವರ್ಷದ ಕ್ರಿಕೆಟಿಗ, ವರ್ಷದ ಶ್ರೇಷ್ಠ ಏಕದಿನ ಕ್ರಿಕೆಟಿಗ ಹಾಗೂ ಎಲ್ಲ ಮಾದರಿ ಕ್ರಿಕೆಟ್ ನಲ್ಲಿ ನೀಡಿರುವ ಅಮೋಘ ಪ್ರದರ್ಶನಕ್ಕೆ ಸರ್ ಗ್ಯಾರಿಫೀಲ್ಡ್ ಸೋಬರ್ಸ್ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. 
ವಿರಾಟ್ ಕೊಹ್ಲಿ ಅವರು ವರ್ಷದ ಶ್ರೇಷ್ಠ ಏಕದಿನ ಕ್ರಿಕೆಟಿಗ ಪ್ರಶಸ್ತಿ ಪಡೆಯುತ್ತಿರುವುದು ಇದು ಎರಡನೇ ಬಾರಿಗೆ. ಇದಕ್ಕೂ ಮೊದಲು 2012ರಲ್ಲಿ ಮೊದಲ ಬಾರಿಗೆ ವರ್ಷದ ಏಕದಿನ ಕ್ರಿಕೆಟಿಗ ಪ್ರಶಸ್ತಿಗೆ ಭಾಜನರಾಗಿದ್ದರು. 
2016ರ ಸೆಪ್ಟೆಂಬರ್ 21 ರಿಂದ 2017ರ ಡಿಸೆಂಬರ್ 31ರವರೆಗಿನ ಪ್ರದರ್ಶನವನ್ನು ಗಮನಿಸಿ ಐಸಿಸಿ ಟೀಂ ಇಂಡಿಯಾ ನಾಯಕನನ್ನು ವರ್ಷದ ಶ್ರೇಷ್ಠ ಕ್ರಿಕೆಟಿಗ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಕೊಹ್ಲಿ ಟೆಸ್ಟ್ ನಲ್ಲಿ 77.80ರ ಸರಾಸರಿಯಲ್ಲಿ 2,203 ರನ್ ಸಿಡಿಸಿದ್ದರು. ಇದರಲ್ಲಿ 5 ದ್ವಿಶತಕ ಸೇರಿದಂತೆ 8 ಶತಕಗಳನ್ನು ಸಿಡಿಸಿದ್ದರು. ಇನ್ನು ಏಕದಿನ ಕ್ರಿಕೆಟ್ ನಲ್ಲಿ 82.63ರ ಸರಾಸರಿಯಲ್ಲಿ 7 ಶತಕ ಸೇರಿದಂತೆ 1,818 ರನ್ ಪೇರಿಸಿದ್ದರು. ಇದೇ ವೇಳೆ ಟಿ20 ಕ್ರಿಕೆಟ್ ನಲ್ಲಿ 153 ಸ್ಟ್ರೈಕ್ ರೇಟ್ ನಲ್ಲಿ 299 ರನ್ ಸಿಡಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್