ಭಾರತ 
ಕ್ರಿಕೆಟ್

ಜಿಂಬಾಬ್ವೆ ವಿರುದ್ಧ ಭಾರತಕ್ಕೆ 10 ವಿಕೆಟ್‌ಗಳ ಭರ್ಜರಿ ಜಯ

ಐಸಿಸಿ ಅಂಡರ್-19 ವಿಶ್ವಕಪ್ ಪಂದ್ಯಾವಳಿಯ ಬಿ ಗುಂಪಿನಲ್ಲಿ ಭಾರತ ಜಿಂಬಾಬ್ವೆ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ...

ಮೌಂಟ್ ಮೌಂಗನ್ಯುಯಿ: ಐಸಿಸಿ ಅಂಡರ್-19 ವಿಶ್ವಕಪ್ ಪಂದ್ಯಾವಳಿಯ ಬಿ ಗುಂಪಿನಲ್ಲಿ ಭಾರತ ಜಿಂಬಾಬ್ವೆ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. 
ಬೇ ಓವಲ್ ನಲ್ಲಿ ನಡೆದ ಪಂದ್ಯಾವಳಿಯಲ್ಲಿ ಭಾರತ ತಂಡ ಜಿಂಬಾಬ್ವೆ ವಿರುದ್ಧ 10 ವಿಕೆಟ್ ಗಳಿಂದ ಭರ್ಜರಿ ಜಯ ಗಳಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ 154 ರನ್ ಗಳಿಗೆ ಆಲೌಟ್ ಆಗಿತ್ತು. 155 ರನ್ ಗಳ ಗುರಿ ಬೆನ್ನಟ್ಟಿದ ಭಾರತ ತಂಡ 21.4 ಓವರ್ ನಲ್ಲಿ ವಿಕೆಟ್ ನಷ್ಟವಿಲ್ಲದೆ 155 ರನ್ ಪೇರಿಸಿ ಗೆಲುವಿನ ನಗೆ ಬೀರಿತು. 
ಭಾರತ ಪರ ಶುಭ್ಮನ್ ಗಿಲ್ ಅಜೇಯ 90 ರನ್ ಹಾಗೂ ಹಾರ್ವಿಕ್ ದೇಸಾಯಿ ಅಜೇಯ 56 ರನ್ ಸಿಡಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. 
ಜಿಂಬಾಬ್ವೆ ಪರ ಮಾದೇವೆರೇ 30, ಶುಂಬಾ 36, ರೋಚೆ 31 ರನ್ ಸಿಡಿಸಿದ್ದಾರೆ. ಭಾರತ ಪರ ಬೌಲಿಂಗ್ ನಲ್ಲಿ ಅಂಕುಲ್ ರಾಯ್ 4, ಅರ್ಷ್‌ದೀಪ್‌ ಸಿಂಗ್‌ ಮತ್ತು ಅಭಿಶೇಕ್ ಶರ್ಮಾ ತಲಾ 2 ವಿಕೆಟ್ ಪಡೆದಿದ್ದಾರೆ. 
ಭಾರತ ಪಂದ್ಯಾವಳಿಯಲ್ಲಿ ಆಡಿರುವ ಮೂರು ಪಂದ್ಯಗಳನ್ನು ಗೆದ್ದು 6 ಅಂಕಗಳೊಂದಿಗೆ ಗ್ರೂಪ್ ಬಿಯಲ್ಲಿ ಅಗ್ರ ಸ್ಥಾನದಲ್ಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!