ಗೆಲುವಿನ ಸಂಭ್ರಮದಲ್ಲಿ ಭಾರತದ ತಂಡ 
ಕ್ರಿಕೆಟ್

ಅಂಧರ ಕ್ರಿಕೆಟ್: ಪಾಕ್ ಮಣಿಸಿ ವಿಶ್ವಕಪ್ ಗೆದ್ದ ಭಾರತ

ಅಂಧರ ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿಯ ಅಂತಿಮ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಭಾರತ ಭರ್ಜರಿ ಗೆಲುವು....

ದುಬೈ: ಅಂಧರ ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿಯ ಅಂತಿಮ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಭಾರತ ಭರ್ಜರಿ ಗೆಲುವು ಸಾಧಿಸುವ ಮೂಲಕ ವಿಶ್ವಕಪ್ ಎತ್ತಿ ಹಿಡಿದೆ.
ಇಂದು ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ 5ನೇ ಆವೃತ್ತಿಯ ರೋಚಕ ಫೈನಲ್ ಪಂದ್ಯದಲ್ಲಿ ಭಾರತ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತ್ತು. ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ 40 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 308ರನ್ ಸೇರಿಸಿತು. ಗೆಲುವಿಗಾಗಿ ಪಾಕ್ ನೀಡಿದ 309 ರನ್ ಗಳ ಗುರಿ ಬೆನ್ನತ್ತಿದ ಭಾರತ 8 ವಿಕೆಟ್ ನಷ್ಟಕ್ಕೆ ಗೆಲುವಿನ ಗುರಿ ತಲುಪಿತು. ಈ ಮೂಲಕ ಎರಡು ವಿಕೆಟ್ ಅಂತರದ ರೋಚಕ ಗೆಲುವು ದಾಖಲಿಸಿತು.
ಪಾಕಿಸ್ತಾನದ ಪರ ಬದರ್ ಮುನಿರ್ 57, ರಿಯಾಸತ್ ಖಾನ್ 48 ಹಾಗೂ ನಿಸಾರ್ ಅಲಿ ಖಾನ್ 47 ರನ್ ಗಳಿಸಿದರು.
ಭಾರತದ ಸುನಿಲ್ ರಮೇಶ್ ಅವರು 93 ರನ್ ಗಳಿಸಿ ಸ್ವಲ್ಪದರಲ್ಲೇ ಶತಕ ವಂಚಿತರಾದರು. ಅಜಯ್ ತಿವಾರಿ ಸಹ 62 ರನ್‌ಗಳ ನಿರ್ಣಾಯಕ ಇನ್ನಿಂಗ್ಸ್ ಕಟ್ಟಿದರು. ಈ ಮೂಲಕ ಸತತ ಎರಡನೇ ಬಾರಿಗೆ ವಿಶ್ವಕಪ್ ಗೆಲ್ಲಲು ನೆರವಾದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!