ಜೊಹಾನ್ಸ್ ಬರ್ಗ್: ದಕ್ಷಿಣ ಆಫ್ರಿಕಾ ವಿರುದ್ಧದ 3ನೇ ಹಾಗೂ ಸರಣಿ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಜೊಹಾನ್ಸ್ ಬರ್ಗ್ ನ ನ್ಯೂ ವಾಂಡರರ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಂತಿಮ ಟೆಸ್ಟ್ ಪಂದ್ಯ ಭಾರತದ ಮಟ್ಟಿಗೆ ಪ್ರಮುಖವಾಗಿದ್ದು, 3 ಪಂದ್ಯಗಳ ಸರಣಿಯಲ್ಲಿ ಈಗಾಗಲೇ ಭಾರತ 2 ಪಂದ್ಯಗಳಲ್ಲಿ ಸೋಲು ಕಾಣುವ ಮೂಲಕ ಸರಣಿ ಕೈ ಚೆಲ್ಲಿದ್ದು, ಈ ಪಂದ್ಯವನ್ನು ಶತಾಯಗತಾಯ ಗೆಲ್ಲುವ ಮೂಲಕ ಮಾನ ಉಳಿಸಿಕೊಳ್ಳಲು ಹವಣಿಸುತ್ತಿದೆ.
ಆದರೆ ದಕ್ಷಿಣ ಆಫ್ರಿಕಾ ಪರಿಸ್ಥಿತಿ ಭಿನ್ನವಾಗಿದ್ದು, ಈಗಾಗಲೇ ಸರಣಿ ಜಯಿಸಿರುವುದರಿಂದ ಈ ಪಂದ್ಯ ಆಪ್ರಿಕಾಗೆ ಬೆಂಚ್ ಸ್ಟ್ರೆಂತ್ ಪರೀಕ್ಷೆಯ ಪಂದ್ಯವಾಗಿದೆ. ಹೀಗಾಗಿ ದಕ್ಷಿಣ ಆಫ್ರಿಕಾ ಕೇಶವ್ ಬದಲಿಗೆ ಅ್ಯಂಡಿಲೇ ಅವರನ್ನು ಕಣಕ್ಕಿಳಿಸಿದೆ. ಇನ್ನು ಭಾರತ ತಂಡ ರೋಹಿತ್ ಶರ್ಮಾ ಬದಲಿಗೆ ರಹಾನೆ ಸ್ಥಾನ ಗಿಟ್ಟಿಸಿದ್ದು, ಅಶ್ವಿನ್ ಬದಲಿಗೆ ಭುವನೇಶ್ವರ್ ಕಣಕ್ಕಿಳಿದಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos