ಚೇತೇಶ್ವರ ಪೂಜಾರ, ರಾಹುಲ್ ದ್ರಾವಿಡ್
ಜೋಹಾನ್ಸ್ ಬರ್ಗ್: ಟೀಂ ಇಂಡಿಯಾದ ಆಟಗಾರ ಚೇತೇಶ್ವರ ಪೂಜಾರ ಅವರು ಭಾರತದ ಗೋಡೆ ಖ್ಯಾತಿಯ ರಾಹುಲ್ ದ್ರಾವಿಡ್ ಅವರ ಅಪರೂಪದ ದಾಖಲೆಯೊಂದನ್ನು ಮುರಿದಿದ್ದಾರೆ.
ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಚೇತೇಶ್ವರ ಪೂಜಾರ ಅವರು 54 ಎಸೆತಗಳನ್ನು ಎದುರಿಸಿ ಕೇವಲ 1 ರನ್ ಸಿಡಿಸಿ ಹೊಸ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.
2008ರಲ್ಲಿ ರಾಹುಲ್ ದ್ರಾವಿಡ್ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಬರೋಬ್ಬರಿ 50 ಎಸೆತಗಳನ್ನು ಎದುರಿಸಿ ಕೇವಲ 1 ರನ್ ಗಳಿಸಿದ್ದರು. ಇದೀಗ ಚೇತೇಶ್ವರ ಪೂಜಾರ ಈ ದಾಖಲೆಯನ್ನು ಮುರಿದಿದ್ದು ಟೆಸ್ಟ್ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ಎಸೆತ ಎದುರಿಸಿ 1 ರನ್ ಗಳಿಸಿದ ಆಟಗಾರ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ.
ಚೇತೇಶ್ವರ ಪೂಜಾರ 54 ಎಸೆತ ಎದುರಿಸಿ 1 ರನ್ ಗಳಿಸುತ್ತಿದ್ದಂತೆ ಡ್ರೆಸ್ಸಿಂಗ್ ರೂಂನಲ್ಲಿ ಕುಳಿತ್ತಿದ್ದ ಸಹ ಆಟಗಾರರು ಪೂಜಾರ ಅವರನ್ನು ಅಭಿನಂದಿಸಿದ್ದಾರೆ.