ಧೋನಿ ರೀತಿ ಸ್ಟಂಪ್ ಔಟ್ನಿಂದ ಬಚಾವ್ ಆಗಲು ಯತ್ನ.. ಟ್ರೋಲ್ಗೆ ಗುರಿಯಾದ ಪಾಕ್ ನಾಯಕ!
ಪಾಕಿಸ್ತಾನ ತಂಡದ ನಾಯಕ ಸರ್ಫರಾಜ್ ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ರೀತಿ ಸ್ಟಂಪ್ ಔಟ್ ನಿಂದ ತಪ್ಪಿಸಿಕೊಳ್ಳಲು ಹೋಗಿ ಔಟಾಗಿ ಟ್ರೋಲ್...
ಪಾಕಿಸ್ತಾನ ತಂಡದ ನಾಯಕ ಸರ್ಫರಾಜ್ ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ರೀತಿ ಸ್ಟಂಪ್ ಔಟ್ ನಿಂದ ತಪ್ಪಿಸಿಕೊಳ್ಳಲು ಹೋಗಿ ಔಟಾಗಿ ಟ್ರೋಲ್ ಗೆ ಗುರಿಯಾಗಿದ್ದಾರೆ.
ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಪಾಕ್ ನಾಯಕ ಸರ್ಫರಾಜ್ ಸ್ಟಂಪ್ ಔಟ್ ನಿಂದ ತಪ್ಪಿಸಿಕೊಳ್ಳಲು ಯತ್ನಿಸಿದರು. ಆದರೆ ಅದು ಸಾಧ್ಯವಾಗದೇ ಔಟ್ ಆದರು. ಆದರೆ ಸಾಮಾಜಿಕ ಜಾಲತಾಣದಲ್ಲಿ ಮಾಜಿ ನಾಯಕ ಎಂಎಸ್ ಧೋನಿ ಸ್ಟೈಲ್ ನಲ್ಲೇ ಸ್ಟಂಪ್ ಔಟ್ ನಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಪಾಕ್ ನಾಯಕ ಔಟಾದರೂ ಎಂದು ಟ್ರೋಲ್ ಮಾಡುತ್ತಿದ್ದಾರೆ.
ಎಂಎಸ್ ಧೋನಿ ಕಳೆದ ವರ್ಷ ನಡೆದಿದ್ದ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಸ್ಟಂಪ್ ಔಟ್ ನಿಂದ ತಪ್ಪಿಸಿಕೊಂಡು ಸುದ್ದಿಯಾಗಿದ್ದರು. ಪಾಕ್ ನಾಯಕ ಸಹ ಧೋನಿ ರೀತಿ ಸ್ಟಂಪ್ ಔಟ್ ನಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಔಟಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ನೆಟಿಜೆನ್ಸ್ ನಗೆಯ ಜಟಾಕಿ ಹರಿಸಿದ್ದಾರೆ.
When you try to copy the stunts performed by professional's
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.