ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ವೇಗಿ ಜಸ್ ಪ್ರೀತ್ ಬುಮ್ರಾ ಮೊದಲ ಬಾರಿಗೆ 5 ವಿಕೆಟ್ ಗೊಂಚಲು ಕಬಳಿಸಿದ್ದಾರೆ.
ಜೋಹಾನ್ಸ್ ಬರ್ಗ್ ನಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಆಫ್ರಿಕಾ ಆಟಗಾರ ಹಾಶೀಂ ಆಮ್ಲಾ, ಡುಪ್ಲೇಸಿಸ್, ಡಿಕಾಕ್, ಪೆಹ್ಲುಕ್ ವಾಯೊ ಎನ್ ಗಿಡಿ ಅವರ ವಿಕೆಟ್ ಗಳನ್ನು ಬೀಳಿಸಿದರು.
ಬುಮ್ರಾ ತಮ್ಮ ಟೆಸ್ಟ್ ಕ್ರಿಕೆಟ್ ಬದುಕಿನ ಮೂರನೇ ಪಂದ್ಯದಲ್ಲೇ ಇನ್ನಿಂಗ್ಸ್ ಒಂದರಲ್ಲಿ 5 ವಿಕೆಟ್ ಗಳ ಗೊಂಚಲು ಪಡೆದ ಸಾಧನೆ ಮಾಡಿದ್ದಾರೆ.