ಮುಂಬೈ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಟೂರ್ನಿಯಿಂದ ಕ್ರಿಕೆಟ್ ಹಿತಾಸಕ್ತಿ ಸಾಧ್ಯವೇ ಎಂದು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.
ಐಪಿಎಲ್ ಎಂದರೇ ಬೆಟ್ಟಿಂಗ್ ಮತ್ತು ಫಿಕ್ಸಿಂಗ್ ಎಂಬ ಭಾವನೆ ಜನರಲ್ಲಿ ಬೇರೂರಿದೆ. ಜತೆಗೆ ವಿದೇಶಿ ವಿನಿಮಯ ನಿಯಮಗಳ ಉಲ್ಲಂಘನೆಯ ದೃಷ್ಟಿಯಿಂದ ಪಂದ್ಯಾವಳಿಯು ಕ್ರಿಕೆಟ್ ಆಟದ ಆಸಕ್ತಿಯನ್ನು ಹೊಂದಿದೆಯೇ ಎಂದು ಯೋಚಿಸಬೇಕಾದ ಸಮಯ ಬಂದಿದೆ ಎಂದು ಬಾಂಬೆ ಹೈಕೋರ್ಟ್ ನ ವಿಭಾಗೀಯ ಪೀಠದ ನ್ಯಾಯಮೂರ್ತಿಗಳಾ ಎಸ್ ಸಿ ಧರ್ಮಾಧಿಕಾರಿ ಮತ್ತು ಭಾರತಿ ಡಾಂಗ್ರೆ ಹೇಳಿದ್ದಾರೆ.
ಜುಲೈ 2015ರ ಆದೇಶ ಪ್ರಶ್ನಿಸಿ ಮಾಜಿ ಐಪಿಎಲ್ ಅಧ್ಯಕ್ಷ ಲಲಿತ್ ಮೋದಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
2009ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆದಿದ್ದ ಐಪಿಎಲ್ ಆವೃತ್ತಿಯಲ್ಲಿ ವಿದೇಶಿ ವಿನಿಮಯ ನಿಯಮಗಳ ಉಲ್ಲಂಘನೆ ಆಗಿದೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿತ್ತು.