ಬ್ರಿಸ್ಟೋಲ್: ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಶರವೇಗದಲ್ಲಿ 2 ಸಾವಿರ ರನ್ ಪೂರೈಸಿದ ಸಾಧನೆ ಮಾಡಿದ ಬೆನ್ನಲ್ಲೇ ಇದೀಗ ಹಿಟ್ ಮ್ಯಾನ್ ರೋಹಿತ್ ಶರ್ಮಾ ಈ ಸಾಧನೆ ಮಾಡುವ ತವಕದಲ್ಲಿದ್ದಾರೆ.
ಟಿ20ಯಲ್ಲಿ 2 ಸಾವಿರ ರನ್ ಪೂರೈಸಲು ರೋಹಿತ್ ಶರ್ಮಾಗೆ ಇನ್ನು 14 ರನ್ ಮಾತ್ರ ಬೇಕಿದ್ದು ಇಂಗ್ಲೆಂಡ್ ವಿರುದ್ಧದ ಇಂದಿನ ಪಂದ್ಯದಲ್ಲಿ ಈ ಸಾಧನೆ ಮಾಡುತ್ತಾರಾ ಕಾದು ನೋಡಬೇಕಿದೆ.
ಒಂದು ವೇಳೆ ರೋಹಿತ್ ಶರ್ಮಾ 14 ರನ್ ಬಾರಿಸಿದ್ದೇ ಆದರೆ ಚುಟುಕು ಕ್ರಿಕೆಟ್ ನಲ್ಲಿ 2 ಸಾವಿರ ರನ್ ಪೂರೈಸಿದ ವಿಶ್ವದ 5ನೇ ಹಾಗೂ ಭಾರತದ 2ನೇ ಆಟಗಾರ ಎಂಬ ಖ್ಯಾತಿಗೆ ಪಾತ್ರರಾಗಲಿದ್ದಾರೆ.
ಇನ್ನು ನ್ಯೂಜಿಲೆಂಡ್ ತಂಡದ ಆಟಗಾರ ಮಾರ್ಟಿನ್ ಗುಪ್ಟಿಲ್ 68 ಪಂದ್ಯಗಳಲ್ಲಿ 2271 ರನ್ ಗಳಿಸುವ ಮೂಲಕ ಅಗ್ರಸ್ಥಾನದಲ್ಲಿದ್ದಾರೆ. 2140 ಗಳಿಸಿರುವ ಬ್ರೆಂಡನ್ ಮೆಕಲಮ್ ಎರಡನೇ ಸ್ಥಾನ ಹಾಗೂ 2078 ರನ್ ಬಾರಿಸುವ ಪಾಕಿಸ್ತಾನದ ಶೋಯೆಬ್ ಮಲ್ಲಿಕ್ ಮೂರನೇ ಸ್ಥಾನದಲ್ಲಿದ್ದಾರೆ. 2059 ರನ್ ಗಳನ್ನು ಬಾರಿಸಿರುವ ಕೊಹ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics