ಸಂಗ್ರಹ ಚಿತ್ರ 
ಕ್ರಿಕೆಟ್

ಮತ್ತೊಂದು ದಾಖಲೆ ಬರೆದ ಧೋನಿ: 10 ಸಾವಿರ ರನ್ ಪೂರೈಸಿದ 2ನೇ ವಿಕೆಟ್ ಕೀಪರ್

ಟೀಂ ಇಂಡಿಯಾದ ಮಿ.ಕೂಲ್ ಮಾಜಿ ಕ್ಯಾಪ್ಟನ್ ಎಂಎಸ್ ಧೋನಿ ಮತ್ತೊಂದು ವಿಶ್ವದಾಖಲೆಯನ್ನು ನಿರ್ಮಿಸಿದ್ದು, ಏಕದಿನ ಕ್ರಿಕೆಟ್ ನಲ್ಲಿ 10 ಸಾವಿರ ಪೂರೈಸಿ ಹಲವು ದಾಖಲೆಗಳಿಕೆ ಕಾರಣರಾಗಿದ್ಜಾರೆ.

ಲಾರ್ಡ್ಸ್: ಟೀಂ ಇಂಡಿಯಾದ ಮಿ.ಕೂಲ್ ಮಾಜಿ ಕ್ಯಾಪ್ಟನ್ ಎಂಎಸ್ ಧೋನಿ ಮತ್ತೊಂದು ವಿಶ್ವದಾಖಲೆಯನ್ನು ನಿರ್ಮಿಸಿದ್ದು, ಏಕದಿನ ಕ್ರಿಕೆಟ್ ನಲ್ಲಿ 10 ಸಾವಿರ ಪೂರೈಸಿ ಹಲವು ದಾಖಲೆಗಳಿಕೆ ಕಾರಣರಾಗಿದ್ಜಾರೆ.
ಇಂಗ್ಲೆಂಡ್ ವಿರುದ್ಧ ಲಾರ್ಡ್ಸ್ ನಲ್ಲಿ ನಡೆದ 2ನೇ ಏಕದಿನ ಪಂದ್ಯದಲ್ಲಿ ಧೋನಿ 37 ರನ್ ಗಳಿಸಿದ್ದರು. ಆ ಮೂಲಕ ಧೋನಿ ಏಕದಿನ ಕ್ರಿಕೆಟ್ ನಲ್ಲಿ 10, 004 ರನ್ ಗಳಿಸಿದ್ದಾರೆ. ವಿಶ್ವಕ್ರಿಕೆಟ್ ನಲ್ಲಿ 10 ಸಾವಿರ ರನ್ ಪೂರೈಸಿದ 2ನೇ ವಿಕೆಟ್ ಕೀಪರ್ ಬ್ಯಾಟ್ಸಮನ್ ಎಂಬ ಕೀರ್ತಿಗೆ ಧೋನಿ ಪಾತ್ರರಾಗಿದ್ದಾರೆ.
ಇದಕ್ಕೂ ಮೊದಲು ಈ ಹಿರಿಮೆ ಶ್ರೀಲಂಕಾದ ವಿಕೆಟ್ ಕೀಪರ್ ಬ್ಯಾಟ್ಸಮನ್ ಕುಮಾರ ಸಂಗಕ್ಕಾರ ಅವರ ಹೆಸರಿನಲ್ಲಿತ್ತು. ಸಂಗಕ್ಕಾರ 13,341 ರನ್ ಗಳಿಸಿದ್ದು, 2015ರಲ್ಲಿ ನಿವೃತ್ತಿ ಘೋಷಣೆ ಮಾಡಿದ್ದರು. ಆ ಬಳಿಕದ ಸ್ಥಾನದಲ್ಲಿ ಎಂಎಸ್ ಧೋನಿ ಇದ್ದು ಧೋನಿ ಒಟ್ಟು 320 ಪಂದ್ಯಗಳಿಂದ 10, 004 ರನ್ ಪೇರಿಸಿದ್ದಾರೆ. ಇನ್ನು ಇದಕ್ಕೂ ಮೊದಲು ಆಸ್ಚ್ರೇಲಿಯಾದ ವಿಕೆಟ್ ಕೀಪರ್ ಬ್ಯಾಟ್ಸಮನ್ ಕಿಲ್ ಕ್ರಿಸ್ಟ್ 9,410 ರನ್ ಗಳಿಸಿ ಎರಡನೇ ಸ್ಥಾನದಲ್ಲಿದ್ದರು. ಈ ಸ್ಥಾನವನ್ನು ಇದೀಗ ಧೋನಿ ಕಸಿದಿದ್ದಾರೆ.
ಇನ್ನು ಧೋನಿ 10 ಸಾವಿರ ರನ್ ಪೂರೈಸುವ ಮೂಲಕ ಈ ಸಾಧನೆ ಮಾಡಿದ ಭಾರತದ ನಾಲ್ಕನೇ ಬ್ಯಾಟ್ಸಮನ್ ಆಗಿದ್ದಾರೆ. ಇದಕ್ಕೂ ಮೊದಲು ಭಾರತ ಕ್ರಿಕೆಟ್ ದಂತಕಥೆಗಳಾದ ಸಚಿನ್ ತೆಂಡೂಲ್ಕರ್ (18, 426 ರನ್ -463 ಪಂದ್ಯ), ಸೌರವ್ ಗಂಗೂಲಿ 11, 363 ರನ್, 311 ಪಂದ್ಯ) ಮತ್ತು ರಾಹುಲ್ ದ್ರಾವಿಡ್  (10, 889 ರನ್, 344 ಪಂದ್ಯ) ಈ ಸಾಧನೆ ಮಾಡಿದ್ದರು. ಇದೀಗ ಈ ಪಟ್ಟಿಗೆ ಎಂಎಸ್ ಧೋನಿ ಸೇರ್ಪಡೆಯಾಗಿದ್ದಾರೆ.  ಅಂತೆಯೇ ಈ ಸಾಧನೆ ಮಾಡಿದ ವಿಶ್ವದ 12 ಆಟಗಾರ ಎಂಬ ಕೀರ್ತಿಗೂ ಧೋನಿ ಭಾಜನರಾಗಿದ್ದಾರೆ. 
ಕ್ಯಾಚ್ ನಲ್ಲೂ ದಾಖಲೆ
ಇಂಗ್ಲೆಂಡ್ ವಿರುದ್ಧದ 2ನೇ ಪಂದ್ಯದಲ್ಲಿ ಉಮೇಶ್ ಯಾದವ್ ಬೌಲಿಂಗ್ ನಲ್ಲಿ ಜಾಸ್ ಬಟ್ಲರ್ ಅವರ ಕ್ಯಾಚ್ ಪಡೆಯುವ ಮೂಲಕ ಧೋನಿ ತ್ರಿಶತಕ ಕ್ಯಾಚ್ ಸಾಧನೆ ಮಾಡಿದ್ದಾರೆ. ಇದು ಅವರ ಏಕದಿನ ಕ್ರಿಕೆಟ್ ನಲ್ಲಿ 300ನೇ ಕ್ಯಾಚ್ ಆಗಿದೆ. 300ಕ್ಕೂ ಅಧಿಕ ಕ್ಯಾಚ್ ಪಡೆದ ಆಟಗಾರರಲ್ಲಿ ಧೋನಿ ನಾಲ್ಕನೇಯವರಾಗಿದ್ದು, ಇದಕ್ಕೂ ಮೊದಲು ಆಸ್ಟ್ರೇಲಿಯಾ ಆ್ಯಡಂ ಗಿಲ್ ಕ್ರಿಸ್ಟ್ (417 ಕ್ಯಾಚ್) ಮೊದಲ ಸ್ಥಾನದಲ್ಲಿದ್ದಾರೆ. ಆ ಬಳಿಕಜದ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾದ ಮಾರ್ಕ್ ಬೌಚರ್ (403 ಕ್ಯಾಚ್), ಮೂರನೇ ಸ್ಥಾನದಲ್ಲಿ ಶ್ರೀಲಂಕಾದ ಕುಮಾರ ಸಂಗಕ್ಕಾರ (402)ಇದ್ದಾರೆ. ಧೋನಿ ನಾಲ್ಕನೇ ಸ್ಥಾನದಲ್ಲಿದ್ದು, ಧೋನಿ ಬಳಿಕದ ಸ್ಥಾನದಲ್ಲಿ ನ್ಯೂಜಿಲೆಂಡ್ ನ ಬ್ರೆಂಡನ್ ಮೆಕ್ಕಲಮ್ (262) ಇದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!