ಎಂಎಸ್ ಧೋನಿ-ಸರ್ಫರಾಜ್ ಅಹಮ್ಮದ್ 
ಕ್ರಿಕೆಟ್

ಎಂಎಸ್ ಧೋನಿಯನ್ನು ಫಾಲೋ ಮಾಡಲು ಹೋಗಿ ನಗೆಗೀಡಾದ ಪಾಕ್ ತಂಡದ ನಾಯಕ, ವಿಡಿಯೋ!

ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿಯನ್ನು ಫಾಲೋ ಮಾಡಲು ಹೋಗಿ ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಸರ್ಫರಾಜ್ ಅಹಮ್ಮದ್ ನಗೆಗೀಡಾಗಿದ್ದಾರೆ...

ನವದೆಹಲಿ: ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿಯನ್ನು ಫಾಲೋ ಮಾಡಲು ಹೋಗಿ ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಸರ್ಫರಾಜ್ ಅಹಮ್ಮದ್ ನಗೆಗೀಡಾಗಿದ್ದಾರೆ. 
ಜಿಂಬಾಬ್ವೆ ವಿರುದ್ಧ ಐದು ಪಂದ್ಯಗಳ ಏಕದಿನ ಸರಣಿಯನ್ನು ವೈಟ್ ವಾಷ್ ಮಾಡಿರುವ ಪಾಕಿಸ್ತಾನ ತಂಡದ ಪರ ಅನೇಕ ಆಟಗಾರರು ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಆದರೆ ನಾಯಕ ಸರ್ಫರಾಜ್ ಅಹಮ್ಮದ್ ಸರಣಿಯಲ್ಲಿ ಗಮನಾರ್ಹ ಪ್ರದರ್ಶನ ನೀಡದೆ ಕೊನೆಯ ಪಂದ್ಯದಲ್ಲಿ ಎಂಎಸ್ ಧೋನಿಯನ್ನು ಕಾಪಿ ಮಾಡಲು ಹೋಗಿ ಮುಖಭಂಗ ಅನುಭವಿಸಿದ್ದಾರೆ. 
ಧೋನಿಯಂತೆ ವಿಕೆಟ್ ಕೀಪರ್ ಕಮ್ ನಾಯಕನಾಗಿರುವ ಸರ್ಫರಾಜ್ ಅಹಮ್ಮದ್ ಧೋನಿ ರೀತಿ ಬೌಲಿಂಗ್ ಮಾಡಲು ಹೋಗಿ ಮುಖಭಂಗ ಅನುಭವಿಸಿದ್ದಾರೆ. ಜಿಂಬಾಬ್ವೆ ವಿರುದ್ಧದ ಕೊನೆಯ ಪಂದ್ಯದಲ್ಲಿ ಕೀಪಿಂಗ್ ಬಿಟ್ಟು ಬೌಲಿಂಗ್ ಮಾಡಿದ ಸರ್ಫರಾಜ್ 2 ಓವರ್ ನಲ್ಲಿ ಯಾವುದೇ ವಿಕೆಟ್ ಪಡೆಯದೇ 15 ರನ್ ನೀಡಿದ್ದಾರೆ. ಇನ್ನು ತಮ್ಮ ಬೌಲಿಂಗ್ ನಲ್ಲಿ ಸಿಕ್ಸರ್ ಹೊಡೆಸಿಕೊಂಡಿರುವುದು ಸರ್ಫರಾಜ್ ನಗೆಪಾಟಲಿಗೆ ಕಾರಣವಾಗಿದೆ. 
ಇನ್ನು 2009ರಲ್ಲಿ ದಕ್ಷಿಣ ಆಫ್ರಿಕಾದ ಜೋಹಾನ್ಸ್ ಬರ್ಗ್ ನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಬೌಲಿಂಗ್ ಮಾಡಿದ್ದ ಧೋನಿ ವೆಸ್ಟ್ ಇಂಡೀಸ್ ತಂಡದ ಟ್ರಾವೀಸ್ ಡಾವ್ಲಿನ್ ವಿಕೆಟ್ ಪಡೆದಿದ್ದರು. ಆ ಮೂಲಕ ಧೋನಿ ಖಾತೆಯಲ್ಲಿ ಒಂದು ಅಂತಾರಾಷ್ಟ್ರೀಯ ವಿಕೆಟ್ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ