ಎಂಎಸ್ ಧೋನಿ ಈ ವರ್ಷ ಎಷ್ಟು ತೆರಿಗೆ ಕಟ್ಟಿದ್ದಾರೆ? ಇಲ್ಲಿದೆ ನೋಡಿ ಮಾಹಿತಿ
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಎಸ್ ಧೋನಿ 2017-18ರ ಆರ್ಥಿಕ ವರ್ಷದಲ್ಲಿ ಜಾರ್ಖಂಡ್ ನಲ್ಲಿ ಅತಿ ಹೆಚ್ಚಿನ ಮೊತ್ತದ ವೈಯಕ್ತಿಕ ಆದಾಯ ತೆರಿಗೆ ಪಾವತಿಸಿದ್ದಾರೆ.
ರಾಂಚಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಎಸ್ ಧೋನಿ 2017-18ರ ಆರ್ಥಿಕ ವರ್ಷದಲ್ಲಿ ಜಾರ್ಖಂಡ್ ನಲ್ಲಿ ಅತಿ ಹೆಚ್ಚಿನ ಮೊತ್ತದ ಆದಾಯ ತೆರಿಗೆ ಪಾವತಿಸಿದ್ದಾರೆ.
ಈ ಬಾರಿ ಎಂಎಸ್ ಧೋನಿ 12. 17 ಕೋಟಿ ರೂ. ಆದಾಯ ತೆರಿಗೆ ಪಾವತಿಸಿದ್ದು, ಬಿಹಾರ ಮತ್ತು ಜಾರ್ಖಂಡ್ ವಲಯದಲ್ಲಿ ಅತಿ ಹೆಚ್ಚಿನ ಮೊತ್ತದ ತೆರಿಗೆ ಸಲ್ಲಿಸಿದ್ದಾರೆ. 2016-17 ನೇ ಸಾಲಿನಲ್ಲಿ ಪಾವತಿಸಿದ್ದ ಮೊತ್ತಕ್ಕಿಂತಲೂ 1.24 ಕೋಟಿ ಹೆಚ್ಚಿನ ಮೊತ್ತವನ್ನು 2017ರ ಸಾಲಿನಲ್ಲಿ ಅವರು ಪಾವತಿಸಿದ್ದಾರೆ .
ಎಂಎಸ್ ಧೋನಿ 2016-17ರಲ್ಲಿ 10.93 ಆದಾಯ ತೆರಿಗೆ ಪಾವತಿಸಿದ್ದರು. ಆದರೆ., ಆ ವರ್ಷದಲ್ಲಿ ಅತಿ ಹೆಚ್ಚು ತೆರಿಗೆ ಪಾವತಿದಾರ ಆಗಿರಲಿಲ್ಲ ಎಂದು ಜಾರ್ಖಂಡ್ ವಲಯದ ಆದಾಯ ತೆರಿಗೆ ಇಲಾಖೆ ಮುಖ್ಯ ಆಯುಕ್ತ ವಿ. ಮಹಾಲಿಂಗಂ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.