ರವಿಶಾಸ್ತ್ರಿ-ಅರ್ಜುನ್ ತೆಂಡೂಲ್ಕರ್ 
ಕ್ರಿಕೆಟ್

ಟೀಂ ಇಂಡಿಯಾ ಆಟಗಾರರ ಜತೆ ಅರ್ಜುನ್ ತೆಂಡೂಲ್ಕರ್, ಕೋಚ್ ರವಿಶಾಸ್ತಿಯಿಂದ ಕೆಲ ಟಿಪ್ಸ್!

ಇಂಗ್ಲೆಂಡ್ ಪ್ರವಾಸ ಕೈಗೊಂಡಿರುವ ಟೀಂ ಇಂಡಿಯಾ ಲಾರ್ಡ್ಸ್ ನಲ್ಲಿ ತರಬೇತಿ ಆರಂಭಿಸಿದ್ದು ಟೀಂ ಇಂಡಿಯಾ ಜತೆ ಕೆಲ ಸಮಯ ಕಳೆದ ಕ್ರಿಕೆಟ್ ದಿಗ್ಗಜ ಸಚಿನ್...

ಲಂಡನ್: ಇಂಗ್ಲೆಂಡ್ ಪ್ರವಾಸ ಕೈಗೊಂಡಿರುವ ಟೀಂ ಇಂಡಿಯಾ ಲಾರ್ಡ್ಸ್ ನಲ್ಲಿ ತರಬೇತಿ ಆರಂಭಿಸಿದ್ದು ಟೀಂ ಇಂಡಿಯಾ ಜತೆ ಕೆಲ ಸಮಯ ಕಳೆದ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ಅವರಿಗೆ ತಂಡದ ಕೋಚ್ ರವಿಶಾಸ್ತ್ರಿ ಕೆಲ ಟಿಪ್ಸ್ ಗಳನ್ನು ನೀಡಿದ್ದಾರೆ. 
ಟೀಂ ಇಂಡಿಯಾ ಆಟಗಾರರ ತರಬೇತಿ ಸಂದರ್ಭದಲ್ಲಿ ಅರ್ಜುನ್ ತೆಂಡೂಲ್ಕರ್ ತಂಡದ ಜೊತೆಗಿನ ಫೋಟೋವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಶೇರ್ ಮಾಡಿದೆ. ಯುವ ಆಟಗಾರ ಅರ್ಜುನ್ ತೆಂಡೂಲ್ಕರ್ ಗೆ ರವಿಶಾಸ್ತ್ರಿಯಿಂದ ಮೌಲ್ಯಯುತ ಸಲಹೆ ಎಂದು ಅಡಿ ಬರಹ ನೀಡಿದೆ. 
ಅರ್ಜುನ್ ತೆಂಡೂಲ್ಕರ್ ಅವರು ಅಂಡರ್-19 ತಂಡಕ್ಕೆ ಆಯ್ಕೆಯಾಗಿದ್ದು ಜುಲೈನಲ್ಲಿ ಶ್ರೀಲಂಕಾ ಪ್ರವಾಸಕೈಗೊಳ್ಳಲಿದ್ದಾರೆ. ಇಂಗ್ಲೆಂಡ್ ನಲ್ಲಿ ತರಬೇತಿ ಪಡೆಯುತ್ತಿದ್ದ ಅರ್ಜುನ್ ತೆಂಡೂಲ್ಕರ್ ಅವರು ಸದ್ಯ ಸ್ವದೇಶಕ್ಕೆ ಹಿಂದಿರುಗಲಿದ್ದು ಡಬ್ಲ್ಯೂವಿ ರಾಮನ್ ಮತ್ತು ಸನತ್ ಕುಮಾರ್ ನೇತೃತ್ವದ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ತರಬೇತಿ ಪಡೆಯಲಿದ್ದಾರೆ. 
ಲಂಕಾ ವಿರುದ್ಧದ ಎರಡು ಟೆಸ್ಟ್ ಪಂದ್ಯಗಳಿಗೆ ಅರ್ಜುನ್ ತೆಂಡೂಲ್ಕರ್ ಆಯ್ಕೆಯಾಗಿದ್ದಾರೆ. ಕಳೆದ ಏಪ್ರಿಲ್ ನಲ್ಲಿ ಧರ್ಮಶಾಲಾದಲ್ಲಿ ನಡೆದ ಅಂಡರ್ 19 ಕ್ರಿಕೆಟಿಗರ ಕ್ಯಾಂಪ್ ನಲ್ಲಿ ಸಚಿನ್ ತೆಂಡೂಲ್ಕರ್ ಆಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ