ಯಜುವೇಂದ್ರ ಚಹಾಲ್ 
ಕ್ರಿಕೆಟ್

ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್ ಸುಲಭವಾಗಿ ರನ್ ಗಳಿಸಿರಬಹುದು, ನಮ್ಮ ವಿರುದ್ಧ ಅಸಾಧ್ಯ: ಚಹಾಲ್

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯನ್ನು ಕ್ಲಿನ್ ಸ್ವೀಪ್ ಮಾಡಿರುವ ಇಂಗ್ಲೆಂಡ್ ಭರ್ಜರಿ ಫಾರ್ಮ್ ನಲ್ಲಿರಬಹುದು ಆದರೆ ಆಸ್ಟ್ರೇಲಿಯಾ ವಿರುದ್ಧ ರನ್ ಗಳಿಸಿದಷ್ಟು...

ಡಬ್ಲಿನ್: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯನ್ನು ಕ್ಲಿನ್ ಸ್ವೀಪ್ ಮಾಡಿರುವ ಇಂಗ್ಲೆಂಡ್ ಭರ್ಜರಿ ಫಾರ್ಮ್ ನಲ್ಲಿರಬಹುದು ಆದರೆ ಆಸ್ಟ್ರೇಲಿಯಾ ವಿರುದ್ಧ ರನ್ ಗಳಿಸಿದಷ್ಟು ಸುಲಭವಾಗಿ ನಮ್ಮ ಬೌಲರ್ ಗಳ ವಿರುದ್ಧ ರನ್ ಬಾರಿಸುವುದು ಅಸಾಧ್ಯ ಎಂದು ಟೀಂ ಇಂಡಿಯಾದ ಸ್ಪಿನ್ ಬೌಲರ್ ಯಜುವೇಂದ್ರ ಚಹಾಲ್ ಹೇಳಿದ್ದಾರೆ. 
ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ 481 ರನ್ ಬಾರಿಸುವ ಮೂಲಕ ಗರಿಷ್ಠ ರನ್ ಬಾರಿಸಿದ ತಂಡ ಎಂಬ ಖ್ಯಾತಿಗೆ ಭಾಜನವಾಗಿದೆ. ಸದ್ಯ ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಕಠಿಣ ತರಬೇತಿಯಲ್ಲಿ ತೊಡಗಿದೆ. 
ಈ ಸಂಬಂಧ ಮಾತನಾಡಿರುವ ಯಜುವೇಂದ್ರ ಚಹಾಲ್, ಇಂಗ್ಲೆಂಡ್ ಆಟಗಾರರು ಪ್ರಮುಖ ಬೌಲರ್ ಗಳ ಅನುಪಸ್ಥಿತಿಯಲ್ಲಿ ಆಸ್ಟ್ರೇಲಿಯಾ ತಂಡದ ಬೌಲಿಂಗ್ ದಾಳಿಯನ್ನು ಸುಲಭವಾಗಿ ಎದುರಿಸಿದ್ದರು. ಆದರೆ ಟೀಂ ಇಂಡಿಯಾದಲ್ಲಿ ನಾನು, ಕುಲದೀಪ್ ಹಾಗೂ ವಾಷಿಂಗ್ಟನ್ ಸುಂದರ್ ಕಳೆದ ಹಲವಾರು ಏಕದಿನ ಪಂದ್ಯಗಳಲ್ಲಿ ಹೆಚ್ಚು ವಿಕೆಟ್ ಪಡೆದಿದ್ದೇವೆ. ಅಲ್ಲದೆ ಇಂಗ್ಲೆಂಡ್ ಸ್ಪಿನ್ ಗಿಂತ ನಮ್ಮ ಸ್ಪಿನ್ ಬಲಿಷ್ಟವಾಗಿದೆ ಎಂದು ಹೇಳಿದರು. 
ಕಳೆದ ದಕ್ಷಿಣ ಆಫ್ರಿಕಾ ವಿರುದ್ಧ ಸರಣಿಯ ವೇಳೆ ಚಹಾಲ್-ಕುಲದೀಪ್ ಯಾದವ್ ಜೋಡಿ ಒಂದೇ ಸರಣಿಯಲ್ಲಿ 33 ವಿಕೆಟ್ ಪಡೆದು ವಿಶ್ವದಾಖಲೆ ನಿರ್ಮಿಸಿತ್ತು. ಇನ್ನು ವಾಷಿಂಗ್ಟನ್ ಸುಂದರ್ ಕೂಡ ಶ್ರೀಲಂಕಾ ಪ್ರವಾಸದಲ್ಲಿ 8 ವಿಕೆಟ್ ಪಡೆದು ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್