ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

2ನೇ ಟಿ20: ಟಾಸ್ ಗೆದ್ದ ಐರ್ಲೆಂಡ್ ಫೀಲ್ಡಿಂಗ್, ಕನ್ನಡಿಗ ಕೆಎಲ್ ರಾಹುಲ್‌ಗೆ ಸ್ಥಾನ, ಧವನ್‌ಗೆ ವಿಶ್ರಾಂತಿ!

ಟೀಂ ಇಂಡಿಯಾ ಹಾಗೂ ಐರ್ಲೆಂಡ್ ನಡುವಿನ ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಐರ್ಲೆಂಡ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ...

ವಿರಾಟ್ ಕೊಹ್ಲಿ- ಕೆಎಲ್ ರಾಹುಲ್
Vishwanath S
Updated On : 29 Jun 2018, 8:21 am
ಡಬ್ಲಿನ್: ಟೀಂ ಇಂಡಿಯಾ ಹಾಗೂ ಐರ್ಲೆಂಡ್ ನಡುವಿನ ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಐರ್ಲೆಂಡ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. 
ಡಬ್ಲಿನ್ ನಲ್ಲಿ ನಡೆಯುತ್ತಿರುವ ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಸೋತ ಭಾರತ ಬ್ಯಾಟಿಂಗ್ ಆರಂಭಿಸಲಿದೆ. ಇನ್ನು ಮೊದಲ ಪಂದ್ಯದಲ್ಲಿ ವಿಶ್ರಾಂತಿ ಪಡೆದಿದ್ದ ಟೀಂ ಇಂಡಿಯಾದ ಆರಂಭಿಕ ಬ್ಯಾಟ್ಸ್ ಮನ್ ಕೆಎಲ್ ರಾಹುಲ್‌ ಎರಡನೇ ಪಂದ್ಯದಲ್ಲಿ ಆಡಲಿದ್ದಾರೆ. ತಂಡದಲ್ಲಿ ಬ್ಯಾಟಿಂಗ್ ವಿಭಾಗದಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಗಿದ್ದು, ಶಿಖರ್ ಧವನ್, ಎಂಎಸ್ ಧೋನಿ, ಜಸ್ ಪ್ರೀತ್ ಬುಮ್ರಾ ಮತ್ತು ಭುವನೇಶ್ವರ್ ಕುಮಾರ್ ಗೆ ವಿಶ್ರಾಂತಿ ನೀಡಲಾಗಿದೆ. 
ಈ ಪಂದ್ಯದ ಮೂಲಕ ಬೌಲರ್ ಸಿದ್ಧಾರ್ಥ್ ಕೌಲ್ ಅಂತಾರಾಷ್ಟ್ರೀಯ ಟಿ20 ಪಂದ್ಯಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. 

Advertisement

Advertisement

ಟೀಂ ಇಂಡಿಯಾ ಆಟಗಾರರ ಪಟ್ಟಿ
ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್‌, ಸುರೇಶ್ ರೈನಾ, ಮನೀಷ್ ಪಾಂಡೆ, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಸಿದ್ಧಾರ್ಥ್ ಕೌಲ್, ಕುಲದೀಪ್ ಯಾದವ್, ಉಮೇಶ್ ಯಾದವ್, ಯಜುವೇಂದ್ರ ಚಹಾಲ್ ಆಡಲಿದ್ದಾರೆ. 
ಐರ್ಲೆಂಡ್ ಆಟಗಾರರ ಪಟ್ಟಿ
ಸ್ಟ್ರಲಿಂಗ್, ಶನೂನ್, ಪೊರ್ಟರ್ ಫೀಲ್ಡ್, ಬಾಲ್ಬಿರ್ನಿ, ಸಿಮಿ ಸಿಂಗ್, ಕೆಜೆ ಒಬ್ರೇನ್, ವಿಲ್ಸನ್, ಎಸ್ ಆರ್ ಥಾಂಪ್ಸನ್, ಡಾಕ್ರೆಲ್, ರಾಂಕಿನ್ ಮತ್ತು ಚೇಸ್ ತಂಡದಲ್ಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments