ಗೆಲುವಿನ ಸಂಭ್ರಮ ಆಚರಿಸುತ್ತಿರುವ ಲಂಕಾ ತಂಡ
ಕೊಲಂಬೊ: ನಿಡಹಾಸ್ ತ್ರಿಕೋನ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಶ್ರೀಲಂಕಾ ಭಾರತದ ವಿರುದ್ಧ ಐದು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.
ಕೊಲಂಬೊದ ಆರ್ ಪ್ರೇಮದಾಸ್ ಕ್ರೀಡಾಂಗಣದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಭಾರತ ನಿಗದಿತ 20 ಓವರ್‌ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 174 ರನ್‌ಗಳ ಬೃಹತ್ ಮೊತ್ತ ಸೇರಿಸಿತ್ತು. ಬೃಹತ್ ಮೊತ್ತವನ್ನು ಬೆನ್ನತ್ತಿದ ಲಂಕಾ ಪಡೆ, ಕುಸಾಲ್ ಪರೇರಾ(66) ಅವರ ಆಕರ್ಷಕ ಅರ್ಧ ಶತಕದ ನೆರವಿನೊಂದಿಗೆ ಐದು ವಿಕೆಟ್ ಗಳಿಂದ ಗೆಲುವು ಸಾಧಿಸಿದೆ.
ಲಂಕಾ ಪರ ಕುಸಾಲ್ ಪರೇರಾ(66), ಕುಸಾಲ್ ಮೆಂಡಿಸ್ (11) ಧುನುಷ್ಕಾ ಗುಣತಿಲಕ (19), ದಿನೇಶ್ ಚಾಂಧಿಮಾಲ್ (14) ಹಾಗೂ ಉಪುಲ್ ತರಂಗ (17), ದಸುನ್ ಶನಕ (15*) ಹಾಗೂ ತಿಸಾರಾ ಪರೇರಾ (22*) ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.
ಭಾರತದ ಪರ ಸುಂದರ್, ಚಾಹಲ್ ತಲಾ 2 ವಿಕೆಟ್ ಮತ್ತು ಉನಾದ್ಕತ್ 1 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.
ಟಾಸ್ ಗೆದ್ದ ಶ್ರೀಲಂಕಾ ಮೊದಲು ಫೀಲ್ಡಿಂಗ್ ಆಯ್ದಕೊಂಡಿತ್ತು. ಭಾರತಕ್ಕೆ ಆರಂಭದಲ್ಲೇ ನಾಯಕನ ರೂಪದಲ್ಲಿ ರೋಹಿತ್ ಶರ್ಮಾ (0) ವಿಕೆಟ್ ನಷ್ಟವಾಯಿತು. ಅನುಭವಿ ಸುರೇಶ್ ರೈನಾ ಸಹ (1) ಹೆಚ್ಚು ಹೊತ್ತು ನಿಲ್ಲಲಿಲ್ಲ. ಇದರೊಂದಿಗೆ 9 ರನ್ ಗಳಿಸುವುದರೆಡೆಗೆ ಪ್ರಮುಖ ಎರಡು ವಿಕೆಟುಗಳನ್ನು ಕಳೆದುಕೊಂಡಿತು.
ಈ ಹಂತದಲ್ಲಿ ಜತೆಗೂಡಿದ ಉಪನಾಯಕ ಶಿಖರ್ ಧವನ್ (90) ಹಾಗೂ ಕನ್ನಡಿಗ ಮನೀಷ್ ಪಾಂಡೆ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರು.
ಯಂಗ್ ಇಂಡಿಯಾ ತಂಡದ ನಾಯಕತ್ವ ವಹಿಸಿರುವ ರೋಹಿತ್ ಶರ್ಮಾ ಯುವ ಪಡೆಯೊಂದಿಗೆ ಲಂಕಾಗೆ ತೆರಳಿತ್ತು. ಬಾಂಗ್ಲಾದೇಶ, ಶ್ರೀಲಂಕಾ ಮತ್ತು ಭಾರತ ನಡುವೆ ತ್ರಿಕೋನ ಟಿ20 ಸರಣಿ ನಡೆಯುತ್ತಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos