ಮೊಹಮ್ಮದ್ ಶಮಿ ಮತ್ತು ಅವರ ಪತ್ನಿ ಹಸೀನ್ ಜಹಾನ್ 
ಕ್ರಿಕೆಟ್

ಅಕ್ರಮ ಸಂಬಂಧ, ಪತ್ನಿಗೆ ಕಿರುಕುಳ ಆರೋಪ ನಿರಾಕರಿಸಿದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ

ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ವಿರುದ್ಧ ಅಕ್ರಮ ಸಂಬಂಧ ಹಾಗೂ ಪತ್ನಿಗೆ ಕಿರುಕುಳ ನೀಡುತ್ತಿರುವ ಆರೋಪಗಳು ಕೇಳಿ ಬಂದಿದ್ದು, ಈ ಆರೋಪಗಳನ್ನು ಶಮಿ ತಿರಸ್ಕರಿಸಿದ್ದಾರೆ...

ನವದೆಹಲಿ: ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ವಿರುದ್ಧ ಅಕ್ರಮ ಸಂಬಂಧ ಹಾಗೂ ಪತ್ನಿಗೆ ಕಿರುಕುಳ ನೀಡುತ್ತಿರುವ ಆರೋಪಗಳು ಕೇಳಿ ಬಂದಿದ್ದು, ಈ ಆರೋಪಗಳನ್ನು ಶಮಿ ತಿರಸ್ಕರಿಸಿದ್ದಾರೆ. 
ತಮ್ಮ ವಿರುದ್ಧ ಕೇಳಿ ಬಂದಿರುವ ಆರೋಪಗಳಿಗೆ ಸಾಮಾಜಿಕ ಜಾಲತಾಣ ಟ್ವಿಟರ್ ಮೂಲಕ ಸ್ಪಷ್ಟನೆ ನೀಡಿರುವ ಅವರು, ನನ್ನ ವೈಯಕ್ತಿಕ ಜೀವನದ ಕುರಿತು ಪ್ರಕಟಗೊಳ್ಳುತ್ತಿರುವ ಎಲ್ಲಾ ಸುದ್ದಿಗಳೂ ಹಾಗೂ ಆರೋಪಗಳು ಸುಳ್ಳು. ನನ್ನ ವಿರುದ್ಧ ಪಿತೂರಿ ನಡೆಸಲಾಗಿದ್ದು, ನನ್ನ ಹೆಸರನ್ನು ಹಾಳು ಮಾಡಲು ಹಾಗೂ ನನ್ನ ಕ್ರೀಡಾ ವೃತ್ತಿಪರತೆಗೆ ಧಕ್ಕೆ ತರಲು ಈ ರೀತಿ ಮಾಡಲಾಗಿದೆ ಎಂದು ಹೇಳಿಕೊಂಡಿದ್ದಾರೆ. 
ಮೊಹಮ್ಮದ್ ಶಮಿ ಅವರ ಪತ್ನಿ ಈ ಹಿಂದೆ ಶಮಿ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದರು. ಶಮಿ ಹಾಗೂ ಅವರ ಕುಟುಂಬ ಸದಸ್ಯರು ತಮಗೆ ಕಿರುಕುಳ ನೀಡುತ್ತಿದ್ದಾರೆಂದು ಫೇಸ್ ಬುಕ್ ನಲ್ಲಿ ಹೇಳಿಕೊಂಡಿದ್ದರು. ಶಮಿ ಅವರು ದೈಹಿಕ ಕಿರುಕುಳ ನೀಡುತ್ತಿದ್ದಾರಲ್ಲದೆ, ವಿವಾಹೇತರ ಸಂಬಂಧ ಹೊಂದಿದ್ದಾರೆಂದು ಹೇಳಿಕೊಂಡಿದ್ದರು. 
ಅಲ್ಲದೆ, ಹಲವು ಮಹಿಳೆಯರೊಂದಿಗೆ ಶಮಿ ಅವರು ವಾಟ್ಸ್'ಅಪ್, ಮೆಸೆಂಜರ್ ಗಳ ಚಾಟ್ ಗಳ ಸ್ಕ್ರೀನ್ ಶಾಟ್ ಗಳನ್ನು ತಮ್ಮ ಫೇಸ್ ಬುಕ್ ಅಕೌಂಟ್ ನಲ್ಲಿ ಶೇರ್ ಮಾಡಿದ್ದರು. ಮಹಿಳೆಯರ ಫೋಟೋಗಳು ಹಾಗೂ ಫೋನ್ ನಂಬರ್ ಹಳನ್ನು ಹಸಿನ್ ಅಪ್ ಲೋಡ್ ಮಾಡಿದ್ದರು. 
ಶಮಿ ಅವರ ತಾಯಿ ಹಾಗೂ ಸಹೋದರ ನನ್ನನ್ನು ಕೊಲ್ಲಲು ಸಂಚು ಮಾಡಿದ್ದಾರೆ, ಶಮಿ ದಕ್ಷಿಣ ಆಫ್ರಿಕಾ ಪ್ರವಾಸದಿಂದ ಬಂದಾಗಿನಿಂದ ದೈಹಿಕವಾಗಿ ಹಿಂಸೆ ನೀಡುತ್ತಿದ್ದಾರೆ, ಮಗಳು ಹಾಗೂ ಕುಟುಂಬದ ದೃಷ್ಟಿಯಿಂದ ಇದನ್ನೆಲ್ಲ ಸಹಿಸಿಕೊಕಂಡಿದ್ದೆ. ಆದರೆ, ಇತ್ತೀಚೆಗೆ ಮಿತಿಮೀರಿದ ವರ್ತನೆ ಸಹಿಸಲಾಗುತ್ತಿಲ್ಲ. ಅಲ್ಲದೆ, ಬೇರೆ ಮಹಿಳೆಯರೊಂದಿಗೆ ಸಂಬಂಧ ಇರುವುದು ಸಾಕ್ಷಿ ಸಮೇತ ತಿಳಿದಿದೆ. ಹೀಗಾಗಿ ಕಾನೂನು ಪ್ರಕಾರ ಮುಂದುವರೆಯುತ್ತೇನೆಂದು ಹಸಿನ್ ಜಹಾನ್ ಹೇಳಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ