ಕ್ರಿಕೆಟ್

ಎರಡನೇ ಟಿ20: ಬಾಂಗ್ಲಾ ವಿರುದ್ಧ ಭಾರತಕ್ಕೆ 6 ವಿಕೆಟ್ ಗಳ ಭರ್ಜರಿ ಜಯ

Lingaraj Badiger
ಕೊಲಂಬೊ: ನಿಡಹಾಸ್ ತ್ರಿಕೋನ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಭಾರತ ಆರು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.
ಕೊಲಂಬೊದ ಆರ್ ಪ್ರೇಮದಾಸ್ ಕ್ರೀಡಾಂಗಣದಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಆರಂಭಿಕ ಆಟಗಾರ ಶಿಖರ್ ಧವನ್ ಅವರ ಆಕರ್ಷಕ ಅರ್ಧ(55) ಶತಕದ ನೆರವಿನಿಂದ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದೆ.
ಮೊದಲು ಬ್ಯಾಟ್ ಮಾಡಿದ ಬಾಂಗ್ಲಾ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 139 ರನ್‌ಗಳ ಸವಾಲಿನ ಮೊತ್ತ ಸೇರಿಸಿತ್ತು. ಗೆಲುವಿಗಾಗಿ 140 ರನ್‌ಗಳ ಸವಾಲಿನ ಮೊತ್ತ ಬೆನ್ನತ್ತಿದ ಭಾರತ ತಂಡವು ಇನ್ನು ಎಂಟು ಎಸೆತಗಳು ಬಾಕಿ ಉಳಿದಿರುವಂತೆಯೇ ನಾಲ್ಕು ವಿಕೆಟ್ ನಷ್ಟಕ್ಕೆ ಗುರಿ ತಲುಪಿತು.
ಇದರೊಂದಿಗೆ ತ್ರಿಕೋನ ಸರಣಿಯಲ್ಲಿ ಖಾತೆ ತೆರೆದುಕೊಂಡಿದೆ. ಇದಕ್ಕೂ ಮೊದಲು ಆತಿಥೇಯ ಶ್ರೀಲಂಕಾ ವಿರುದ್ಧ ನಡೆದ ಮೊದಲ ಪಂದ್ಯದಲ್ಲಿ ಭಾರತ ಐದು ವಿಕೆಟುಗಳ ಅಂತರದ ಸೋಲು ಅನುಭವಿಸಿತ್ತು.
ಭಾರತದ ಪರ, ನಾಯಕ ರೋಹಿತ್ ಶರ್ಮಾ17, ಶಿಖರ್ ಧವನ್ 55, ರಿಷಭ್ ಪಂತ್ 7, ಸುರೇಶ್ ರೈನಾ 28, ಔಟಾಗದೆ ಮನೀಶ್ 27 ಮತ್ತು ದಿನೇಶ್ ಕಾರ್ತಿಕ್ 2 ರನ್ ಗಳಿಸಿದ್ದಾರೆ.
ನಿಡಹಾಸ್ ತ್ರಿಕೋನ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಭಾರತ ಆರು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.
SCROLL FOR NEXT