ಸಂಗ್ರಹ ಚಿತ್ರ 
ಕ್ರಿಕೆಟ್

ಪತ್ನಿಗೆ ಕಿರುಕುಳ ಆರೋಪ: ಕ್ರಿಕೆಟಿಗೆ ಮೊಹಮದ್ ಶಮಿ ವಿರುದ್ಧ ಕೊಲೆ ಯತ್ನ, ಹಲ್ಲೆ ಪ್ರಕರಣ ದಾಖಲು

ಪತ್ನಿಗೆ ಕಿರುಕುಳ ನೀಡಿದ ಆರೋಪದ ಮೇರೆಗೆ ಭಾರತ ಕ್ರಿಕೆಟ್ ತಂಡದ ವೇಗಿ ಮೊಹಮದ್ ಶಮಿ ವಿರುದ್ಧ ಎಫ್ ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.

ಕೋಲ್ಕತಾ: ಪತ್ನಿಗೆ ಕಿರುಕುಳ ನೀಡಿದ ಆರೋಪದ ಮೇರೆಗೆ ಭಾರತ ಕ್ರಿಕೆಟ್ ತಂಡದ ವೇಗಿ ಮೊಹಮದ್ ಶಮಿ ವಿರುದ್ಧ ಎಫ್ ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.
ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾದ ಜಾದವ್ ಪುರ್ ಪೊಲೀಸ್ ಠಾಣೆಯಲ್ಲಿ ಮಹಮದ್ ಶಮಿ ಪತ್ನಿ ಹಸೀನ್ ಜಹಾನ್ ನೀಡಿದ ದೂರನ್ನು ದಾಖಲಿಸಿಕೊಂಡ ಪೊಲೀಸರು ಇದೀಗ ಶಮಿ ವಿರುದ್ಧ ಐಪಿಸಿ  ಸೆಕ್ಷನ್ 498ಎ (ಪತಿ ಮತ್ತು ಅವರ ಕುಟುಂಬಸ್ಥರಿಂದ ದೈಹಿಕ ಹಿಂಸೆ), 307 ಕೊಲೆ ಯತ್ನ, 323 ದೈಹಿಕ ಹಿಂಸೆ, 378 ಅತ್ಯಾಚಾರ, 506 ಕ್ರಿಮಿನಲ್ ಬೆದರಿಕೆ ಮತ್ತು ಸೆಕ್ಷನ್ 328 ಮತ್ತು ಸೆಕ್ಷನ್ 34ರ ಅಡಿಯಲ್ಲಿ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.
ಇಂದು ಬೆಳಗ್ಗೆಯಷ್ಟೇ ಶಮಿ ಪತ್ಮಿ ಕೋಲ್ಕತಾದ ಜಾದವ್ ಪುರ ಪೊಲೀಸ್ ಠಾಣೆಗೆ ತೆರಳಿ ದೈಹಿಕ ಹಿಂಸೆ ಮತ್ತಿತ್ಯಾದಿ ಆರೋಪಗಳ ಕುರಿತು ದೂರು ದಾಖಲಿಸಿದ್ದರು. ಬಳಿಕ ಮಾತನಾಡಿದ್ದ ಅವರು, ಅಧಿಕಾರಿಯನ್ನು ಭೇಟಿ ಮಾಡಿದ್ದೇನೆ. ಶಮಿ ನನಗೆ ನೀಡಿದ್ದ ಕಿರುಕುಳ ಕುರಿತಂತೆ ಎಲ್ಲಾ ವಿಚಾರವನ್ನು ಅಧಿಕಾರಿಗೆ ತಿಳಿಸಿದ್ದೇನೆ. ಅಲ್ಲದೆ. ನನ್ನನ್ನು ಮದುವೆಯಾಗಿದ್ದರೂ ಮತ್ತೊಬ್ಬ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿರುವ ವಿಚಾರವನ್ನೂ ತಿಳಿಸಿದ್ದೇನೆಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯಸಭೆ ಚುನಾವಣೆಗೆ ಇಂದು ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ?: NDAಯಲ್ಲಿ ಮಹತ್ವದ ಬೆಳವಣಿಗೆ

US–Iran conflict| ಇರಾನ್ ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ; 6ನೇ ದಿನಕ್ಕೆ ಕಾಲಿಟ್ಟ ಯುದ್ಧ –ಡೊನಾಲ್ಡ್ ಟ್ರಂಪ್ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಸೆನೆಟ್ ವಿಫಲ

'ಮಧ್ಯಪ್ರಾಚ್ಯ ಸಂಘರ್ಷ: ಇರಾನ್ ಯುದ್ಧಕ್ಕೆ ನಾನು 10ಕ್ಕೆ 15 ಅಂಕ ಕೊಡುತ್ತೇನೆ, ಅಮೆರಿಕಾ ಈಗ ಅತ್ಯಂತ ಬಲಿಷ್ಠ ಸ್ಥಿತಿಯಲ್ಲಿದೆ': Donald Trump

ರಾಜ್ಯ ಬಜೆಟ್ 2026-27: ಮದ್ಯ ತೆರಿಗೆಯಿಂದ ರಾಜ್ಯಕ್ಕೆ ಭಾರೀ ಆದಾಯ, ಆದಾಯ ಗುರಿ 45,000 ಕೋಟಿ ರೂ.ಗೆ ಹೆಚ್ಚಿಸಲು ಸರ್ಕಾರ ಚಿಂತನೆ..!

'ಮಧ್ಯಪ್ರಾಚ್ಯ ಸಂಘರ್ಷ ಎಫೆಕ್ಟ್: ಇಂಧನ ಬೆಲೆ ಬೆಲೆ ಏರಿಕೆ ಭೀತಿ, ಪೆಟ್ರೋಲ್ ಬಂಕ್‌'ಗಳಿಗೆ ಮುಗಿಬಿದ್ದ ಜನ..!

SCROLL FOR NEXT