ಮುಷ್ಫಿಕರ್ ರಹೀಂ ಸ್ಫೋಟಕ ಬ್ಯಾಟಿಂಗ್ 
ಕ್ರಿಕೆಟ್

ನಿಡಹಾಸ್ ಟಿ20 ಸರಣಿ: ಶ್ರೀಲಂಕಾ ವಿರುದ್ಧ ಬಾಂಗ್ಲಾದೇಶಕ್ಕೆ ದಾಖಲೆ ಜಯ

ನಿಡಹಾಸ್ ಟಿ20 ತ್ರಿಕೋನ ಏಕದಿನ ಸರಣಿ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಪ್ರವಾಸಿ ಬಾಂಗ್ಲಾದೇಶ ದಾಖಲೆಯ ರನ್ ಚೇಸ್ ಮಾಡುವ ಮೂಲಕ ಜಯಭೇರಿ ಬಾರಿಸಿದೆ.

ಕೊಲಂಬೋ: ನಿಡಹಾಸ್ ಟಿ20 ತ್ರಿಕೋನ ಏಕದಿನ ಸರಣಿ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಪ್ರವಾಸಿ ಬಾಂಗ್ಲಾದೇಶ ದಾಖಲೆಯ ರನ್ ಚೇಸ್ ಮಾಡುವ ಮೂಲಕ ಜಯಭೇರಿ ಬಾರಿಸಿದೆ.
ಕೊಲಂಬೋದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಇಂದು ನಡೆದ ಮೂರನೇ ಟಿ20 ಪಂದ್ಯದಲ್ಲಿ ಲಂಕಾ ನೀಡಿದ 215 ರನ್ ಗಳ ಗುರಿಯನ್ನು ಬಾಂಗ್ಲಾದೇಶ ತಂಡ ಇನ್ನು ಎರಡು ಎಸೆತಗಳು ಬಾಕಿ ಇರುವಂತೆಯೇ ಕೇವಲ 5 ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿತು. ಬಾಂಗ್ಲಾದೇಶ ಮಧ್ಯಮ ಕ್ರಮಾಂಕದ ಆಟಗಾರ ಮುಷ್ಫಿಕರ್ ರಹೀಂ ಸ್ಫೋಟಕ ಬ್ಯಾಟಿಂಗ್ (ಅಜೇಯ 72 ರನ್) ನೆರವನಿಂದಾಗಿ ಬಾಂಗ್ಲಾದೇಶ ತಂಡ ಇನ್ನೂ 2 ಎಸೆತಗಳು ಬಾಕಿ ಇರುವಂತೆಯೇ ಗೆಲುವು ತನ್ನದಾಗಿಸಿಕೊಂಡಿತು.
ಶ್ರೀಲಂಕಾದ 215 ರನ್‌ಗಳ ಗೆಲುವಿನ ಗುರಿ ಬೆನ್ನತ್ತಿದ ಬಾಂಗ್ಲಾದೇಶ, ಮುಷ್ಫಿಕರ್ ರಹೀಂ (72 ಅಜೇಯ), ಲಿಟನ್ ದಾಸ್ (43) ಹಾಗೂ ತಮೀಮ್ ಇಕ್ಬಾಲ್ (47) ಅವರ ಬಿರುಸಿನ ಆಟದ ನೆರವಿನೊಂದಿಗೆ ಇನ್ನು 2 ಎಸೆತಗಳು ಬಾಕಿ ಉಳಿದಿರುವಂತೆಯೇ ಐದು ವಿಕೆಟ್ ನಷ್ಟಕ್ಕೆ ಗುರಿ ತಲುಪಿತು. 
ದಾಖಲೆ ಬರೆದ ಬಾಂಗ್ಲಾ ಹುಲಿಗಳು
ಇನ್ನು ಇಂದು ಬಾಂಗ್ಲಾದೇಶ ದಾಖಲೆಯ ರನ್ ಚೇಸ್ ಮಾಡಿದ್ದು, ಇದು ಟಿ-20 ಕ್ರಿಕೆಟ್ ಇತಿಹಾಸದಲ್ಲೇ ನಾಲ್ಕನೇ ಅತಿ ದೊಡ್ಡ ರನ್ ಚೇಸ್ ಆಗಿದೆ. ಈ ಮೂಲಕ ಬಾಂಗ್ಲಾ ಹುಲಿಗಳು ಇತಿಹಾಸದ ಪುಟ ಸೇರಿದ್ದಾರೆ. ಅಂತೆಯೇ ಇದರೊಂದಿಗೆ ಅಂಕಪಟ್ಟಿಯಲ್ಲಿ ಖಾತೆ ತೆರೆದುಕೊಂಡಿದೆ. ಇದೀಗ ಮೊದಲ ಸುತ್ತಿನ ಪಂದ್ಯಗಳ ಬಳಿಕ ಎಲ್ಲ ಮೂರು ತಂಡಗಳು ಸಮಾನ ಅಂಕಗಳನ್ನು ಹಂಚಿಕೊಂಡಂತಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ