ಸಂಗ್ರಹ ಚಿತ್ರ 
ಕ್ರಿಕೆಟ್

ಮಹಿಳಾ ಏಕದಿನ ಕ್ರಿಕೆಟ್: ಭಾರತದ ವಿರುದ್ಧ ಆಸ್ಟ್ರೇಲಿಯಾಗೆ 8 ವಿಕೆಟ್ ಜಯ

ಗುಜರಾತಿನ ವಡೋದರಾದಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಎಂಟು ವಿಕೆಟ್ ಗಳ ಸೋಲನುಭವಿಸಿದೆ.

ವಡೋದರಾ(ಗುಜರಾತ್): ಗುಜರಾತಿನ ವಡೋದರಾದಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್  ಮೊದಲ ಏಕದಿನ ಪಂದ್ಯದಲ್ಲಿ ಭಾರತ ಎಂಟು ವಿಕೆಟ್ ಗಳ ಸೋಲನುಭವಿಸಿದೆ.
ಟಾಸ್ ಗೆದ್ದ  ಹರ್ಮನ್‌ಪ್ರೀತ್‌ ಕೌರ್‌ ಬಳಗ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು ನಿಗದಿತ ಐವತ್ತು ಓವರ್ ಗಳಲ್ಲಿ 200 ರನ್ ಗೆ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡಿತ್ತು. 
ಬಾರತದ ಪರ ಪೂಜಾ ವಸ್ತ್ರಾಕರ್ ಅವರು ಅರ್ಧಶತಕ (51) ಗಳಿಸುವಲ್ಲಿ ಯಶಸ್ವಿಯಾಗಿದ್ದರು. ಆದರೆ ಇವರ ಹೊರತಾಗಿ ಯಾರೊಬ್ಬರೂ ಸಹ ಐವತ್ತು ರನ್ ಸಮೀಪ ಬರಲು ಸಮರ್ಥರಾಗಿರಲಿಲ್ಲ.
ನಂತರ ಬ್ಯಾಟಿಂಗ್ ಪ್ರಾರಂಭಿಸಿದ ಆಸ್ಟ್ರೇಲಿಯಾ ನಿಕೊಲೆ ಬೋಲ್ಟನ್‌ ಅವರ ಶತಕದ ಸಹಾಯದೊಡನೆ 32.1 ಓವರ್ ಗಳಲ್ಲಿ ನಿಗದಿತ ಗುರಿ ತಲುಪಿ ಜಯದ ನಗು ಬೀರಿದೆ. 
ಒಟ್ಟು ಮೂರು ಪಂದ್ಯಗಳ ಸರಣಿಯಲ್ಲಿ ಆಸ್ಟ್ರೇಲಿಯಾ 1-0 ಮುನ್ನಡೆ ಸಾಧಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT