ರೋಹಿತ್ ಶರ್ಮಾ 
ಕ್ರಿಕೆಟ್

ಟಿ20ಯಲ್ಲಿ ರೋಹಿತ್ ಶರ್ಮಾ 7000 ರನ್ ಗಳ ಸಾಧನೆ

ಶ್ರೀಲಂಕಾದ ಕೊಲಂಬೊದಲ್ಲಿ ನಡೆಯುತ್ತಿರುವ ನಿಡಹಾಸ್ ತ್ರಿಕೋನ ಟಿ20 ಸರಣಿಯ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ....

ಕೊಲಂಬೊ: ಶ್ರೀಲಂಕಾದ ಕೊಲಂಬೊದಲ್ಲಿ ನಡೆಯುತ್ತಿರುವ ನಿಡಹಾಸ್ ತ್ರಿಕೋನ ಟಿ20 ಸರಣಿಯ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ 7000 ರನ್‌ ಪೂರೈಸಿದ್ದು, ಈ ಸಾಧನೆ ಮಾಡಿದ ಮೂರನೇ ಭಾರತೀಯ ಹಾಗೂ ಒಟ್ಟಾರೆಯಾಗಿ 10ನೇ ಬ್ಯಾಟ್ಸ್‌ಮನ್ ಎಂಬ ಗೌರವಕ್ಕೆ ಪಾತ್ರವಾಗಿದ್ದಾರೆ.
ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಫೈನಲ್ ಪಂದ್ಯದಲ್ಲಿ ಹಿಟ್ ಮ್ಯಾನ್ ಇಂತಹದೊಂದು ಮೈಲುಗಲ್ಲು ತಲುಪಿದ್ದಾರೆ.
ಟೀಂ ಇಂಡಿಯಾ ಖಾಯಂ ನಾಯಕ ವಿರಾಟ್ ಕೊಹ್ಲಿ ಅವರಿಗೆ ವಿಶ್ರಾಂತಿ ಸೂಚಿಸಿದ್ದರಿಂದ ತ್ರಿಕೋನ ಸರಣಿಯಲ್ಲಿ ತಂಡವನ್ನು ಮುನ್ನಡೆಸುವ ಅವಕಾಶವನ್ನು ಉಪ ನಾಯಕರಾಗಿರುವ ರೋಹಿತ್ ಶರ್ಮಾ ಗಿಟ್ಟಿಸಿಕೊಂಡಿದ್ದಾರೆ.
ರೋಹಿತ್ ಪಡೆ ಮೊದಲ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಸೋಲು ಅನುಭವಿಸಿದ್ದರೂ ಬಳಿಕದ ಎಲ್ಲ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಫೈನಲ್ ಜಾಗವನ್ನು ಖಾತ್ರಿಪಡಿಸಿಕೊಂಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT